ವ್ಯವಸ್ಥೆಯ ಸುಧಾರಣೆಯಲ್ಲಿ ನಮ್ಮ ಪಾತ್ರ' ವಿಚಾರ ಸಂಕೀರ್ಣ
ಭದ್ರಾವತಿಯಲ್ಲಿ ಅ.೧೯ರಂದು ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲರ ೯೬ನೇ ದಿನಾಚರಣೆ ಆಯೋಜಿಸಿರುವ ಕುರಿತು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಭದ್ರಾವತಿ: ಧೀಮಂತ ನಾಯಕ, ಸಮಾಜವಾದಿ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರ ೯೬ನೇ ಜನ್ಮದಿನಾಚರಣೆ ಅ.೧೯ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭನವದಲ್ಲಿ ಜೆ.ಎಚ್ ಪಟೇಲ್ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿದೆ ಎಂದು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್.ಗೌಡ ತಿಳಿಸಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆ.ಎಚ್ ಪಟೇಲರು ಕನ್ನಡ ನಾಡಿನ ಜನರು ಎಂದಿಗೂ ಮರೆಯಲಾಗದ ಜನಪರ ನಾಯಕ, ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯನ್ನು ಎತ್ತಿಹಿಡಿದು ಉತ್ತಮ ಆಡಳಿತ ನೀಡಿದ ರಾಜಕೀಯ ಮುತ್ಸದ್ದಿ. ಎಲ್ಲಾ ಧರ್ಮದ, ಜಾತಿ ಜನಾಂಗದ, ಬಡವರ, ದೀನದಲಿತರ ಆಶಾ ಕಿರಣವಾಗಿ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದು ಕೊಂಡಿದ್ದಾರೆ. ಇವರ ಆದರ್ಶತನಗಳು, ಚಿಂತನೆಗಳು, ಆಡಳಿತ ವ್ಯವಸ್ಥೆ, ಜನಪರ ಕಾಳಜಿ ಇಂದಿನ ರಾಜಕೀಯ ವ್ಯಕ್ತಿಗಳಿಗೆ ಮಾರ್ಗದರ್ಶಕವಾಗಿವೆ ಎಂದರು.
ಜೆ.ಎಚ್ ಪಟೇಲರ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಉದ್ದೇಶದೊಂದಿಗೆ ಅಂದು `ವ್ಯವಸ್ಥೆಯ ಸುಧಾರಣೆಯಲ್ಲಿ ನಮ್ಮ ಪಾತ್ರ' ಮತ್ತು ಮೈಕ್ರೋ ಫೈನಾನ್ಸ್‌ಗಳಿಂದ ಎದುರಾಗುತ್ತಿರುವ ಸಮಸ್ಯೆಗಳನ್ನು ನಿಯಂತ್ರಿಸುವ ಕುರಿತ ವಿಚಾರ ಸಂಕೀರ್ಣ ಏರ್ಪಡಿಸಲಾಗಿದೆ ಎಂದರು.
ಜ.ಎಚ್ ಪಟೇಲರ ಪುತ್ರ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತ ಪಟೇಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್‌ಬಾನು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಕರುನಾಡ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಮುಖಂಡರುಗಳಾದ ಯೋಗೇಶ್‌ನಾಯ್ಕ್, ಸೈಯ್ಯದ್ ಜಾಫರ್, ವಿಜಯಕುಮಾರ್, ಶಿವಕುಮಾರ್, ಟಿ.ಜಿ ಬಸವರಾಜಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ