Featured Post

ಪಾರ್ವತಮ್ಮ ನಿಧನ

ಮಂಗಳವಾರ, ಅಕ್ಟೋಬರ್ 21, 2025

ಪಾರ್ವತಮ್ಮ ನಿಧನ

ಪಾರ್ವತಮ್ಮ 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಸಿದ್ದಾರೂಢ ನಗರದ ನಿವಾಸಿ ಪಾರ್ವತಮ್ಮ ರಾಮಯ್ಯ (೭೬) ಭಾನುವಾರ ಸಂಜೆ ಹೃದಯಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 
    ಇವರಿಗೆ ಮೂವರು ಪುತ್ರಿಯರು, ಇಬ್ಬರು ಪುತ್ರರರು ಇದ್ದಾರೆ.  ಸೋಮವಾರ ನಗರದ ಅಪ್ಪರ್ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ಇವರ ಅಂತ್ಯಸಂಸ್ಕಾರ ನೆರವೇರಿತು.
    ಕರ್ನಾಟಕ ಜವಳಿ ಮತ್ತು ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ, ತಾಲೂಕು ಪಂಚಾಯತಿ  ಮಾಜಿ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಸಿ.ಎಂ.ರಮೇಶ್, ಆಲೆಮನೆ ನಾಗಣ್ಣ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ