ಭದ್ರಾವತಿ ನಗರಸಭೆ ವಾರ್ಡ್ ನಂ.೨೬ರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೭೦ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಭದ್ರಾವತಿ : ನಗರಸಭೆ ವಾರ್ಡ್ ನಂ.೨೬ರ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೭೦ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ನಗರಸಭೆ ಮಾಜಿ ಸದಸ್ಯ ಪ್ರಾನ್ಸಿಸ್ ತಾಯಿ ಭುವನೇಶ್ವರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ಧ್ವಜಾರೋಹಣ ನೆರವೇರಿಸಿದರು. ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ, ಅಧ್ಯಕ್ಷ ಬಿ. ಜಗದೀಶ್.ಪ್ರಧಾನ ಕಾರ್ಯದರ್ಶಿ ಶ್ಯಾಮ್, ಉಪಾಧ್ಯಕ್ಷ ವಿಲಿಯಂ ಸಂಪತ್ ಕುಮಾರ್, ಡಿಎಸ್‌ಎಸ್ ಮುಖಂಡ ದಾಸ್, ಮುರಳಿ ಕೃಷ್ಣ, ಜ್ಯೋತಿ ಪ್ರಸಾದ್, ಪುರುಷೋತ್ತಮ, ಬಿ.ಆರ್ ಸುನಿಲ್ ಕುಮಾರ್, ಎಂ. ಯತೀಶ್, ನಿರಂಜನ್, ರಘು. ಪ್ರೀತಮ್ ಹಾಗೂ ಸಂಘದ ಸದಸ್ಯರು, ಸ್ಥಳೀಯರು ಪಾಲ್ಗೊಂಡಿದ್ದರು.
ಸಂಘದಿಂದ ಎಲ್ಲಾ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ವಿವಿಧ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವ ಸಂಘ ಈ ಭಾಗದಲ್ಲಿ ಗಮನ ಹೆಚ್ಚು ಸೆಳೆದಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ