ಕುಮರಿ ನಾರಾಯಣಪುರ ನಾಗರಾಜಣ್ಣ
ಭದ್ರಾವತಿ : ತಾಲೂಕಿನ ಕುಮರಿ ನಾರಾಯಣಪುರ ಗ್ರಾಮದ ನಿವಾಸಿ, ಎಚ್.ಎಲ್.ಜಿ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ ನಾಗರಾಜಣ್ಣ ಮಂಗಳವಾರ ಬೆಳಿಗ್ಗೆ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಇದ್ದಾರೆ. ನಾಗರಾಜಣ್ಣ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಧರ್ಮೇಗೌಡರವರ ಸಹೋದರಿಯ ಪತಿಯಾಗಿದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ನಡೆಯಲಿದ್ದು, ಇವರ ನಿಧನಕ್ಕೆ ಧರ್ಮೇಗೌಡ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು, ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ