ಡಿ.ಎಚ್ ಮಾಯಮ್ಮ
ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪು ನಿವಾಸಿ, ಶಿಕ್ಷಕಿ ಡಿ.ಎಚ್ ಮಾಯಮ್ಮ(೬೦) ಗುರುವಾರ ನಿಧನ ಹೊಂದಿದರು.
ಓರ್ವ ಪುತ್ರ, ಸೊಸೆ, ಸಹೋದರ, ಸಹೋದರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಾಯಮ್ಮ ಸುಮಾರು ೧೮ ವರ್ಷಗಳ ಕಾಲ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರ್ಸರಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ನಿಧನಕ್ಕೆ ನಗರದ ಗಣ್ಯರು, ಶಿಕ್ಷಕ ವೃಂದದವರು ಸಂತಾಪ ಸೂಚಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ