ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಭವಿಷ್ಯ ರೂಪಿಸಿಕೊಳ್ಳಬೇಕು. ಆಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದು ಜನಪದ ಕಲಾವಿದ ತಮಟೆ ಜಗದೀಶ್ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨ ಯೋಜನಾ ಕಛೇರಿಯಿಂದ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ಜಾಗೃತಿ ಗೀತೆಗಳ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ, ದುಶ್ಚಟಗಳಿಗೆ ಬಲಿಯಾಗದೆ ಸಮಾಜದಲ್ಲಿ ಬದುಕುವ ರೀತಿ, ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. .
ಶಾಲೆಯ ಮುಖ್ಯೋಪಾಧ್ಯಾಯ ಶೀವ್ಯಾನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾಗತಿಬೆಳಗಲು ವಲಯದ ಮೇಲ್ವಿಚಾರಕಿ ಎಸ್. ದೀಪಿಕಾ, ಸೇವಾಪ್ರತಿನಿಧಿ ರಾಧಾ ಮತ್ತು ಒಕ್ಕೂಟದ ಪದಾಧಿಕಾರಿ ಪವಿತ್ರ, ಶಾಲಾ ಶಿಕ್ಷಕವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ