ಭದ್ರಾವತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮುರಳಿಯವರ ನೇತೃತ್ವದಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷ ಮುರಳಿಯವರ ನೇತೃತ್ವದಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ನಗರದ ಬೈಪಾಸ್ ರಸ್ತೆ, ಬಾರಂದೂರು ತಿರುವಿನಲ್ಲಿರುವ ಹಳ್ಳಿಮನೆ ಹೋಟೆಲ್ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಕಾರು ಹಾಗು ದ್ವಿಚಕ್ರ ವಾಹನಗಳಲ್ಲಿ ಜಾಥಾ ನಡೆಸಿ ತರೀಕೆರೆ ರಸ್ತೆ ಮೂಲಕ ಗಾಂಧಿ ವೃತ್ತ ತಲುಪಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ನಂತರ ಮಾಧವಚಾರ್ ವೃತ್ತ ಮೂಲಕ ಡಾ. ರಾಜಕುಮಾರ್ ರಸ್ತೆಯಲ್ಲಿ ಸಾಗಿ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞ ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾ ಅಂತ್ಯಗೊಳಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಅನಿಲ್, ತಾಲೂಕ ಅಧ್ಯಕ್ಷ ಆನಂದ್ ನಾಯ್ಡು, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ಭಾನುಶ್ರೀ, ತಾಲೂಕು ಮಹಿಳಾ ಅಧ್ಯಕ್ಷೆ ಅನ್ನಪೂರ್ಣ, ಪರಮೇಶ್, ಹರೀಶ್, ಲೋಹಿತ್, ರುಕ್ಮಿಣಿ, ಸುಜಿತ್, ಅಮಿತ್, ಅನಿಲ್, ಲಕ್ಷ್ಮಮ್ಮ, ವೈಭವ್, ನಿಂಗಣ್ಣ ಸೇರಿದಂತೆ ಕರಾವೇ ಕಾರ್ಯಕರ್ತರು, ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ