ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ವಿಶ್ವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ವಿಶ್ವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
    ನಗರಸಭೆ ಸದಸ್ಯೆ ಮಂಜುಳಾ ಸುಬ್ಬಣ್ಣ  ಮಕ್ಕಳಿಗೆ ಲಸಿಕೆ ಹಾಕಿ ಮಹಿಳೆಯರು ತಪ್ಪದೇ ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
     ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ಹಾಗೂ ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ಎಸ್. ರಾಜಶೇಖರ್ ಉಪ್ಪಾರ, ರಾಮಮೂರ್ತಿ ಹಾಗೂ ಹರೀಶ್ ಕುಮಾರ್ ಸೇರಿದಂತೆ ಸ್ಥಳೀಯ ಪ್ರಮುಖರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.