ಡಿ.೩೦ರಂದು ಮಿಲ್ಟ್ರಿಕ್ಯಾಂಪ್‌ನಲ್ಲಿ ವೈಕುಂಠ ಏಕಾದಶಿ
ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಶ್ರೀ ಕ್ಷೇತ್ರ ಶ್ರೀ ಶ್ರೀನಿವಾಸಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಡಿ.೩೦ರಂದು ವೈಕುಂಠ ಏಕಾದಶಿ ಏರ್ಪಡಿಸಲಾಗಿದೆ.
ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ, ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಬೆಳಿಗ್ಗೆ ೫ ಗಂಟೆಯಿಂದ ರಾತ್ರಿ ೧೦ ಗಂಟೆವರೆಗೆ ವೈಕುಂಠನಾಥನ ವಿಶೇಷ ದರ್ಶನ ಏರ್ಪಡಿಸಲಾಗಿದೆ.
ಸಂಜೆ ೬.೩೦ರಿಂದ ಸರಸ್ವತಿ ಕಲಾ ಸಂಗೀತ ಮತ್ತು ನೃತ್ಯ ಶಾಲೆ ವತಿಯಿಂದ ಸಂಗೀತ ಮತ್ತು ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವ ಮೂಲಕ ಯಶಸ್ವಿಗೊಳಿಸುವಂತೆ ದೇವಸ್ಥಾನ ಆಡಳಿತ ಮಂಡಳಿ ಕೋರಿದೆ.