ಎಂಪಿಎಂ ನಿವೃತ್ತ ಕಾರ್ಮಿಕ ಪರಮೇಶ್ ನಿಧನ
ಪರಮೇಶ್
ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಕಾರ್ಮಿಕ, ಕಾಗದ ನಗರ ನಿವಾಸಿ ಪರಮೇಶ್(೬೮) ಶುಕ್ರವಾರ ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಪರಮೇಶ್ ಎಂಪಿಎಂ ಕಾರ್ಖಾನೆ ನೀರು ಸರಬರಾಜು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಶನಿವಾರ ಬೈಪಾಸ್ ರಸ್ತೆ, ಬುಳ್ಳಾಪುರ ಶ್ರೀ ಶಂಕ್ರಪ್ಪ ಕಟ್ಟೆ ಸಮೀಪದ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ಎಂಪಿಎಂ ಕಾರ್ಖಾನೆ ನಿವೃತ್ತ ಕಾರ್ಮಿಕರು, ಕಾಗದನಗರ ನಿವಾಸಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.