ಡಿ.೩೦ರಂದು ಶಾಲಾ-ಕಾಲೇಜು ವಾರ್ಷಿಕೋತ್ಸವ
ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ(ಎಸ್‌ಎವಿ) ಶಾಲಾ-ಕಾಲೇಜು ವಾರ್ಷಿಕೋತ್ಸವ ಡಿ.೩೦ರ ಮಂಗಳವಾರ ಸಂಜೆ ೫ ಗಂಟೆಗೆ ಎಸ್‌ಎವಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಉಪಸ್ಥಿತರಿರುವರು.
ಚಲನಚಿತ್ರ ನಟ, ನಿರ್ದೇಶಕ ಮಂಡ್ಯ ರಮೇಶ್ ಮುಖ್ ಅತಿಥಿಗಳಾಗಿ ಆಗಮಿಸಲಿದ್ದು, ವೇದಿಕೆ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವಿದ್ಯಾರ್ಥಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾಲಾ-ಕಾಲೇಜು ವಾರ್ಷಿಕೋತ್ಸವ ಯಶಸ್ವಿಗೊಳಿಸುವಂತೆ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕೋರಿದೆ.
