ನಿವೃತ್ತ ಶಿಕ್ಷಕ, ಜ್ಯೋತಿಷಿ ಸತ್ಯನಾರಾಯಣ ಭಟ್ ನಿಧನ

ಸತ್ಯನಾರಾಯಣ ಭಟ್ 
    ಭದ್ರಾವತಿ : ನಗರದ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ನಿವೃತ್ತ ಗಣಿತ ಶಿಕ್ಷಕ, ಜ್ಯೋತಿಷಿ ಸತ್ಯನಾರಾಯಣ ಭಟ್(೬೪) ಸೋಮವಾರ ನಿಧನ ಹೊಂದಿದರು. 
    ಪತ್ನಿ, ಪುತ್ರ ಇದ್ದಾರೆ. ಮಕ್ಕಳಿಗೆ ಗಣಿತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಆಧ್ಯಾತ್ಮಿಕ ಮೌಲ್ಯಗಳನ್ನು ಸಹ ತಿಳಿಸಿಕೊಡುತ್ತಿದ್ದರು. ಹಲವು ವರ್ಷಗಳವರೆಗೆ ಶಿಕ್ಷಕರಾಗಿ, ನಂತರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಅಪಾರ ಶಿಷ್ಯವೃಂದ ಹೊಂದಿದ್ದರು. ವೃತ್ತಿ ಬದುಕಿನ ಜೊತೆಗೆ ಜ್ಯೋತಿಷಿಯಾಗಿ ಸಹ ಗುರುತಿಸಿಕೊಂಡಿದ್ದರು. 
    ಇವರ ನಿಧನಕ್ಕೆ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದ ಮತ್ತು ಶಿಷ್ಯವೃಂದ ಹಾಗು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.