ಜನ್ನಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ಭದ್ರಾವತಿ ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭದ್ರಾವತಿ: ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ತಾಯಂದಿರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಅಭಿಯಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಸ್ಥಳೀಯ ತಾಯಂದಿರು ಉಪಸ್ಥಿತರಿದ್ದರು.