ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಮೋಹನ್‌ರವರ ಪುತ್ರ, ಯುವ ಮುಖಂಡ ಬಿ.ಎಂ ರವಿಕುಮಾರ್ ೪೦ನೇ ಹುಟ್ಟುಹಬ್ಬ ಎನ್‌ಎಸ್‌ಯುಐ ವತಿಯಿಂದ ಹಣ್ಣು, ಬ್ರೆಡ್ ವಿತರಿಸುವ ಮೂಲಕ ಸೋಮವಾರ ಆಚರಿಸಲಾಯಿತು.
ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಮೋಹನ್‌ರವರ ಪುತ್ರ, ಯುವ ಮುಖಂಡ ಬಿ.ಎಂ ರವಿಕುಮಾರ್ ೪೦ನೇ ಹುಟ್ಟುಹಬ್ಬ ಎನ್‌ಎಸ್‌ಯುಐ ವತಿಯಿಂದ ಸೋಮವಾರ ಆಚರಿಸಲಾಯಿತು.
ಹುಟ್ಟುಹಬ್ಬದ ಅಂಗವಾಗಿ ಜನ್ನಾಪುರ ನಗರ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು. ನಗರಸಭೆ ಸದಸ್ಯ ಶರವಣ, ಎನ್‌ಎಸ್‌ಯುಐ ಗೌರವಾಧ್ಯಕ್ಷ ಮುರುಗೇಶ್, ತಾಲೂಕು ಉಪಾಧ್ಯಕ್ಷ ಗಂಗಾಧರ್, ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆದಿಲ್ ಭಾಷಾ, ಜಯಕರ್ನಾಟಕ ಸಂಘಟನೆ ಶಂಕರಘಟ್ಟ ಶಾಖೆ ಅಧ್ಯಕ್ಷ ಡಿ.ಟಿ ಶಶಿಕುಮಾರ್, ಸೋಮಶೇಖರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.