ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ಭದ್ರಾವತಿ : ಕಳೆದ ಸುಮಾರು ೩ ವರ್ಷಗಳಿಂದ ನಿರ್ಮಾಣಗೊಳ್ಳುತ್ತಿರುವ ನಗರದ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯಗೊಂಡಿದ್ದು, ಯುಗಾದಿ ಹಬ್ಬದಂದು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಅವರು ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡರಾದ ಜಿ. ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್‌ರವರು ಆನಂದ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.
ರೈಲ್ವೆ ಮೇಲ್ಸೇತುವೆಯಿಂದ ಸಾಕಷ್ಟು ಪ್ರಯೋಜನವಾಗಲಿದ್ದು, ಬಿ.ಎಚ್ ರಸ್ತೆಯಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಸಹಕಾರಿಯಾಗಿದೆ ಎಂದರು.
ನಗರಸಭೆ ಮಾಜಿ ಸದಸ್ಯ, ಪಕ್ಷದ ಯುವ ಮುಖಂಡ ಜಿ. ಆನಂದಕುಮಾರ್‌ರವರು ಪ್ರತಿ ವರ್ಷದಂತೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನೆನಪಿನಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸುತ್ತಿದ್ದು, ಅಲ್ಲದೆ ಆನಂದ ಸಾಮಾಜಿಕ ಸೇವಾ ಸಂಸ್ಥೆ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮಂಡಲ ಅಧ್ಯಕ್ಷ ಜಿ.ಧರ್ಮ ಪ್ರಸಾದ್, ಮುಖಂಡರಾದ ಟಿ.ಎಸ್ ದುಗ್ಗೇಶ್, ಅಣ್ಣಪ್ಪ, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಮಧುಕರ್ ಕಾನಿಟ್ಕರ್, ದಿನೇಶ್, ಕೆ.ಎಚ್ ತೀರ್ಥಯ್ಯ, ನಗರಸಭಾ ಸದಸ್ಯೆ ಅನುಪಮ ಚನ್ನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.