
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹಾಗು ಹೊಸ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು ೧೦ ಕೋ.ರು. ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಒಂದೇ ದಿನ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕ್ಷೇತ್ರದ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹಾಗು ಹೊಸ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು ೧೦ ಕೋ.ರು. ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಒಂದೇ ದಿನ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಗೆರೆ ಮುಖ್ಯ ರಸ್ತೆಯಿಂದ ಸಿದ್ಧರ ದೇವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಉದಯನಗರ ಗ್ರಾಮದ ಮುಖ್ಯರಸ್ತೆಯಿಂದ ಬದನೆಹಾಳು ಮಾರ್ಗವಾಗಿ ಬಂಡಿ ಗುಡ್ಡಕ್ಕೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ಹಾಗು ಪಾಲಿ ಕ್ಲಿನಿಕ್ ಕಟ್ಟಡ ಉದ್ಘಾಟನೆ ನೆರವೇರಿಸಲಾಯಿತು.
ದೊಡ್ಡೇರಿ ಗ್ರಾಮದಲ್ಲಿ ಕೆರೆ ಏರಿ ಮೇಲೆ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ, ಉಕ್ಕುಂದ ಗ್ರಾಮದ ಮುಖ್ಯ ರಸ್ತೆಯಿಂದ ನಗರಕ್ಕೆ ಕೂಡುವ ರಸ್ತೆ ಡಾಂಬರೀಕರಣ, ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜಿ ಗುಡ್ಡದಿಂದ ಕಾಚಗೊಂಡನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರತ್ನಪುರದಿಂದ ಉಕ್ಕುಂದ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಹಾಗು ಅಂತರಗಂಗೆ ಬೋವಿ ಕಾಲೋನಿಯ ಅಂಗನವಾಡಿ ಕಟ್ಟಡ ಉದ್ಘಾಟಿಸಲಾಯಿತು.
ಕೆಂಚನಹಳ್ಳಿ ಕಾಲೋನಿಯಿಂದ ಹಡ್ಲಘಟ್ಟ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ, ಬಾರಂದೂರು ಮತ್ತು ಮಾವಿನಕೆರೆ ಮುಖ್ಯ ರಸ್ತೆಯಿಂದ ಕೆಂಚನಹಳ್ಳಿ ಮತ್ತು ನೀರುಗುಂಡಿ ಮೊಸರಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಮಾವಿನಕೆರೆ ಕಾಲೋನಿಯಿಂದ ಶಿವಪುರ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಿಂಗನಹಳ್ಳಿ ಮುಖ್ಯ ರಸ್ತೆಯಿಂದ ಕೆಂಚೇನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಬಿ.ಎಚ್ ರಸ್ತೆಯಿಂದ ಕೆಂಪೇಗೌಡ ನಗರದ ಮಾರ್ಗವಾಗಿ ಕಾಳಿಂಗನಹಳ್ಳಿ ಕೂಡುವ ರಸ್ತೆ ಕಾಮಗಾರಿ, ಕಾರೇಹಳ್ಳಿ ಭದ್ರಾ ಪ್ಯಾಕೇಜ್ ರಸ್ತೆಯಿಂದ ಬಿ.ಎಚ್ ರಸ್ತೆವರೆಗೆ ಅಭಿವೃದ್ಧಿ ಕಾಮಗಾರಿ, ಹಳೇ ಬಾರಂದೂರು ಮುಖ್ಯ ರಸ್ತೆಯಿಂದ, ಬಿ.ಎಚ್ ರೋಡ್ ಮುಖ್ಯರಸ್ತೆಯವರೆಗೆ ಕಾಂಕ್ರೀಟ್ ರಸ್ತೆ ಮತ್ತು ಬಾಳೇ ಮಾರನಹಳ್ಳಿ ಮುಖ್ಯ ರಸ್ತೆಯಿಂದ ಹಳೇ ಹಿರಿಯೂರು ಚಾನೆಲ್‌ವರಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಜಿಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ದಿ ಅಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.