ಭದ್ರಾವತಿ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದ ಮುಂಭಾಗದಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ: ನಗರದ ವಿವಿಧ ದೇವಸ್ಥಾನಗಳಲ್ಲಿ ಹಾಗು ಸಂಘ-ಸಂಸ್ಥೆಗಳಿಂದ ಭಾನುವಾರ ಶ್ರೀರಾಮನವಮಿ ವಿಜೃಂಭಣೆ ಆಚರಿಸಲಾಯಿತು. ಎಲ್ಲೆಡೆ ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ ನಡೆಯಿತು.
ನ್ಯೂಟೌನ್ ಶ್ರೀರಾಮ ದೇವಾಲಯ:
ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದ ಮುಂಭಾಗದಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀರಾಮನವಮಿ ವಿಜೃಂಭಣೆಯಿಂದ ಜರುಗಿತು.
ರಾಮನವಮಿ ಅಂಗವಾಗಿ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಅಲಂಕಾರ, ಉತ್ಸವ ಮೂರ್ತಿಗಳ ಮೆರವಣಿಗೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಭಕ್ತರಿಗೆ ಕೋಸಂಬರಿ ಹಾಗು ಪಾನಕ ವಿತರಿಸಲಾಯಿತು.
ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಶ್ರೀ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಹಳೇನಗರ ಶ್ರೀ ರಾಮೇಶ್ವರ ದೇವಾಲಯ:
ಹಳೇನಗರದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಶ್ರೀ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಪಂಚಾಮೃತ ಅಭಿಷೇಕ, ನಂತರ ಶ್ರೀರಾಮ ದೇವರ ರಾಜಬೀದಿ ಉತ್ಸವ ನಡೆಯಿತು. ಉತ್ಸವ ದೇವಾಲಯಕ್ಕೆ ಹಿಂದಿರುಗಿ ಬಂದ ನಂತರ ಮಹಾ ಮಂಗಳಾರತಿಯೊಂದಿಗೆ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ಹಾಗು ಪಾನಕ ಮತ್ತು ಕೋಸಂಬರಿ ವಿತರಣೆ ಮಾಡಲಾಯಿತು. ವಿವಿಧ ಭಜನಾ ಮಂಡಳಿಗಳ ಸದಸ್ಯರು, ದೇವಾಲಯ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀರಾಮನವಮಿ ಅಂಗವಾಗಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೆರವಣಿಗೆ ನಡೆಸಲಾಯಿತು.
ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ:
ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀರಾಮನವಮಿ ಅಂಗವಾಗಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೆರವಣಿಗೆ ನಡೆಸಲಾಯಿತು.
ಬೆಳಗ್ಗೆ ೭ ಗಂಟೆಗೆ ಪಂಚಾಮೃತ ಅಭಿಷೇಕ, ೮ ಗಂಟೆಗೆ ದೇವರ ರಾಜಬೀದಿ ಉತ್ಸವ ಹಾಗೂ ೧೨ ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ನಡೆಯಿತು. ಪ್ರಧಾನ ಅರ್ಚಕ ರಂಗನಾಥ ಶರ್ಮಾ, ಸಹಾಯಕ ಅರ್ಚಕ ಶ್ರೀನಿವಾಸನ್ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
ವೇದಘೋಷ ಪಾಠಶಾಲೆ ಶಿಷ್ಯ ವೃಂದವರು, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಜಿ. ರಮಾಕಾಂತ್ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ಯಜಮಾನ್ ಕೃಷ್ಣ ಸಂಗಡಿಗರು ಉತ್ಸವ ನಡೆಸಿಕೊಟ್ಟರು.
ಭದ್ರಾವತಿ ಬಿಜೆಪಿ ಮಂಡಲ ವತಿಯಿಂದ ಪಕ್ಷದ ೪೬ನೇ ಸಂಸ್ಥಾಪನಾ ದಿನ ಹಾಗು ಶ್ರೀರಾಮನವಮಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಆಚರಿಸಲಾಯಿತು.
ಬಿಜೆಪಿ ೪೬ನೇ ಸಂಸ್ಥಾಪನಾ ದಿನ, ಪವಿತ್ರ ಶ್ರೀರಾಮನವಮಿ ಸಂಭ್ರಮಾಚರಣೆ :
ಬಿಜೆಪಿ ಮಂಡಲ ವತಿಯಿಂದ ಪಕ್ಷದ ೪೬ನೇ ಸಂಸ್ಥಾಪನಾ ದಿನ ಹಾಗು ಶ್ರೀರಾಮನವಮಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಆಚರಿಸಲಾಯಿತು. ಶ್ರೀರಾಮ ದೇವರಿಗೆ ಪುಷ್ಪಾರ್ಚನೆಯೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸಿ ಸಂಸ್ಥಾಪಕರನ್ನು ಸ್ಮರಿಸಲಾಯಿತು.
ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಮೊಸರಹಳ್ಳಿ ಅಣ್ಣಪ್ಪ, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಎಂ. ಮಂಜುನಾಥ್, ಎಚ್. ತೀರ್ಥಯ್ಯ, ಕಾರಾ ನಾಗರಾಜ್, ಬಿ.ಜಿ ರಾಮಲಿಂಗಯ್ಯ, ಸರಸ್ವತಿ, ಧನುಷ್‌ಬೋಸ್ಲೆ, ರಾಜಶೇಖರ್, ಸತೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು.
ಬಿಟಿವೈನಿಂದ ಶ್ರೀರಾಮನವಮಿ:
ಕಡುಬಡವರು, ನಿರ್ಗತಿಕರಿಗೆ ಬೆಳಗಿನ ಉಚಿತ ಉಪಹಾರ, ಉಚಿತ ಕುಡಿಯುವ ನೀರಿನ ಸೇವೆ ಸೇರಿದಂತೆ ಇನ್ನಿತರ ಸೇವಾಕಾರ್ಯಗಳನ್ನು ಕೈಗೊಂಡು ನಗರದಲ್ಲಿ ಗಮನ ಸೆಳೆದಿರುವ ಭದ್ರಾವತಿ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ಶ್ರೀರಾಮನವಮಿ ಆಚರಿಸಲಾಯಿತು.
ನಗರದ ಕೆಎಸ್‌ಆರ್‌ಟಿಸಿ ಮುಖ್ಯಬಸ್‌ನಿಲ್ದಾಣ ಮುಂಭಾಗ ಕೈಗೊಂಡಿರುವ ಉಚಿತ ಕುಡಿಯುವ ನೀರಿನ ಸೇವೆ ಸ್ಥಳದಲ್ಲಿ ಅಸೋಸಿಯೇಷನ್ ವತಿಯಿಂದ ಶ್ರೀರಾಮ ದೇವರಿಗೆ ಪುಷ್ಪಾರ್ಚನೆ ಸಲ್ಲಿಸಿ ಕೋಸಂಬರಿ ಮತ್ತು ಪಾನಕ ವಿತರಿಸಲಾಯಿತು.