ಭದ್ರಾವತಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್‌ಕುಮಾರ್ ಅವರಿಗೆ ೨೦೨೩ನೇ ಸಾಲಿನ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಭದ್ರಾವತಿ : ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್‌ಕುಮಾರ್ ಅವರಿಗೆ ೨೦೨೩ನೇ ಸಾಲಿನ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಜಿಲ್ಲಾಡಳಿತ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿವಮೊಗ್ಗ ನೌಕರರ ಸಂಘದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ೨೫ ಸಾವಿರ ರು. ನಗದು ಹಾಗು ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.
ರಾಜ್‌ಕುಮಾರ್‌ರವರು ಬಹಳ ವರ್ಷ ನ್ಯೂಟೌನ್ ಮತ್ತು ಕಾಗದನಗರ ಕೇಂದ್ರ ಗ್ರಂಥಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್‌ಕುಮಾರ್‌ರವರು ವೃತ್ತಿ ಬದುಕಿನ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದು, ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಿವಮೊಗ್ಗ ನಗರ ಶಾಸಕ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಜಿಲ್ಲಾಮಟ್ಟದ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್ ಚಂದ್ರಭೂಪಾಲ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.