ಶುಕ್ರವಾರ, ಮೇ 9, 2025

ರೈಲ್ವೆ ಕ್ಯಾಂಟೀನ್ ಮಾಲೀಕ ಗುರುಪ್ರಸಾದ್ ನಿಧನ

 ಕೆ.ಬಿ.ಗುರುಪ್ರಸಾದ್(ಉನ್ನಿ) 
    ಭದ್ರಾವತಿ : ಬಹಳ ವರ್ಷಗಳಿಂದ ನಗರದ ರೈಲ್ವೆ ಕ್ಯಾಂಟೀನ್ ಮಾಲೀಕರಾಗಿರುವ, ನಗರಸಭೆ ವಾರ್ಡ್ ೩ರ ವ್ಯಾಪ್ತಿಯ ಚಾಮೇಗೌಡ ಏರಿಯಾ ನಿವಾಸಿ ಕೆ.ಬಿ.ಗುರುಪ್ರಸಾದ್(೫೮) ಗುರುವಾರ ರಾತ್ರಿ ನಿಧನ ಹೊಂದಿದರು. 
    ಪತ್ನಿ, ಓರ್ವ ಪುತ್ರ ಹಾಗು ಓರ್ವ ಪುತ್ರಿ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಸಮೀಪದ ಭದ್ರಾ ನದಿ ತೀರದ ತೋಟದಲ್ಲಿ ನೆರವೇರಿತು.  ಸುಮಾರು ೫ ದಶಕಗಳಿಂದ ರೈಲ್ವೆ ಕ್ಯಾಂಟೀನ್ ಇವರ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿದ್ದು, ಗುರುಪ್ರಸಾದ್‌ರವರು ಉನ್ನಿ ಎಂಬ ಹೆಸರಿನಲ್ಲಿ ಚಿರಪರಿಚಿತರಾಗಿದ್ದರು. 
    ಸಂತಾಪ:
    ಶಾಸಕ ಬಿ.ಕೆ.ಸಂಗಮೇಶ್ವರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಎರೇಹಳ್ಳಿ ಗ್ರಾ.ಪಂ. ಸದಸ್ಯ ಸಿ.ಆರ್ ಶಿವರಾಂ, ಬಿಜೆಪಿ ಮುಖಂಡ ಕೂಡ್ಲಿಗೆರೆ ಹಾಲೇಶ್, ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ಮುಖಂಡರಾದ ಕರುಣಾಕರ್, ಮುಕುಂದರಾವ್, ರೈಲ್ವೆ ಅಧಿಕಾರಿಗಳು ಸಿಬ್ಬಂದಿಗಳು, ಅನೇಕ ಸಂಘ ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. 

ಮೇ.೧೦ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗ, ಘಟಕ-೧ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೦ರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಹೊಸನಂಜಾಪುರ, ಹಳೇನಂಜಾಪುರ, ಹಿರಿಯೂರು, ಹಳೇಹಿರಿಯೂರು, ಅಮಲಮಾತಾ ಆಸ್ಪತ್ರೆ, ತಿಮ್ಲಾಪುರ, ಮೂಲೆಕಟ್ಟೆ, ಹೌಸಿಂಗ್ ಬೋರ್ಡ್ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಕೋರಿದ್ದಾರೆ. 

ಕಾರ್ಮಿಕರು ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾನೂನುಗಳು ಸಹಕಾರಿ : ಎಂ. ಶಿವಕುಮಾರ್

ಭದ್ರಾವತಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಮಾಚೇನಹಳ್ಳಿ, ಶಾಂತಲಾ ಸ್ಪೆರೋ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕಾರ್ಮಿಕ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಾಹಿತಿ ಕಾರ್ಯಾಗಾರ ನ್ಯಾಯವಾದಿ ಎಂ. ಶಿವಕುಮಾರ್, ಕಾರ್ಮಿಕ ನಿರೀಕ್ಷಕ ರಕ್ಷಿತ್, ವ್ಯವಸ್ಥಾಪಕ ನಿರ್ದೇಶಕ ಡಿ.ಬಿ ಅಶೋಕ್, ನಂಜುಂಡೇಶ್ವರ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ : ಕಾರ್ಮಿಕರು ನ್ಯಾಯಯುತವಾದ ಸೌಲಭ್ಯಗಳು ಪಡೆದುಕೊಳ್ಳುವಲ್ಲಿ ಕಾನೂನುಗಳು ಹೆಚ್ಚಿನ ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಕಾನೂನಿನ ಬಗ್ಗೆ ಅರಿವು ಹೊಂದಬೇಕೆಂದು ನ್ಯಾಯವಾದಿ ಎಂ. ಶಿವಕುಮಾರ್ ಹೇಳಿದರು. 
    ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಮಾಚೇನಹಳ್ಳಿ, ಶಾಂತಲಾ ಸ್ಪೆರೋ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಮಿಕ ಅಧಿನಿಯಮ ಹಾಗೂ ಕಾರ್ಮಿಕರ ಹಕ್ಕುಗಳ ಬಗ್ಗೆ  ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉಪನ್ಯಾಸ ನೀಡಿದರು. 
    ಕಾರ್ಮಿಕರು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಶ್ರಮ ಶ್ಲಾಘನೀಯವಾಗಿದ್ದು, ಕಾರ್ಮಿಕರಿಗೆ ನ್ಯಾಯಯುತವಾಗಿ ಲಭಿಸಬೇಕಾಗಿರುವ ವೈದ್ಯಕೀಯ ಹಾಗೂ ವಿಮಾ  ಸೌಕರ್ಯಗಳು ಸುಲಭವಾಗಿ ಸಿಗುತ್ತಿಲ್ಲ. ಕಾರ್ಮಿಕ ಸಂಘಗಳ ಮೂಲಕ ಸಂಘಟಿತ ಹೋರಾಟ ನಡೆಸಿ ಅಥವಾ ಕಾನೂನು ಹೋರಾಟದ ಮೂಲಕ ಪಡೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕರು ಕಾನೂನಿನ ಅರಿವನ್ನು ಪಡೆದು ಹೆಚ್ಚಿನ ಪರಿಹಾರ ಪಡೆದುಕೊಳ್ಳಬಹುದು ಎಂದರು. 
    ಕಾರ್ಮಿಕರ ಶ್ರಮ ಬಂಡವಾಳಕ್ಕಿಂತ ದೊಡ್ಡದು. ಅವರ ಶ್ರಮ ಮತ್ತು ಕೌಶಲ್ಯ ಬಂಡವಾಳ ಶಾಹಿಗಳು ಗುರುತಿಸಬೇಕು. ಅವರಿಗೆ ಮೂಲಭೂತ ಸೌಕರ್ಯಗಳು, ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದರು. 
    ಕಾರ್ಮಿಕ ನಿರೀಕ್ಷಕ  ರಕ್ಷಿತ್, ಶಾಂತಲಾ ಸ್ಪೆರೋ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಡಿ.ಬಿ ಅಶೋಕ್ ಹಾಗೂ ನಂಜುಂಡೇಶ್ವರ, ಹಿರಿಯ ನ್ಯಾಯವಾದಿಗಳಾದ ರಮೇಶ್‌ಸಿಂಗ್ ಮತ್ತು ವಿಶ್ವನಾಥ್ ಹಾಗು ಕಾನೂನು ಸೇವಾ ಸಮಿತಿ ಸಂಯೋಜಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಜೃಂಭಣೆಯಿಂದ ಜರುಗಿದ ಶ್ರೀ ಚೌಡೇಶ್ವರಿ ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 
    ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೪.೩೦ ರಿಂದ ೬.೩೦ರ ವರೆಗೆ ಗಂಗಾಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಮೂರ್ತಿ ಕ್ಷೇಮ ಮಹಾಪ್ರತಿಷ್ಠೆ ಹಾಗು ಮಹಾಪೂರ್ಣಾಹುತಿ ಹಾಗು ಅಭಿಜಿತ್ ಲಗ್ನದ ಶುಭ ಮುಹೂರ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ ಕಳಸಾರೋಹಣ ಮತ್ತು ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 


ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 
    ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸುರಗಿತೋಪು, ಕಾಗದನಗರ, ನ್ಯೂಟೌನ್, ಜೆಪಿಎಸ್ ಕಾಲೋನಿ, ಬಾಲಭಾರತಿ, ಆಂಜನೇಯ ಅಗ್ರಹಾರ, ಜನ್ನಾಪುರ, ಉಜ್ಜನಿಪುರ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. 
    ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ಎಂ. ರಾಮಕೃಷ್ಣಪ್ಪ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಎನ್. ಉಮೇಶ್, ಪ್ರಧಾನ ಕಾರ್ಯದರ್ಶಿ ಕೆ. ಪರಮೇಶ್, ಸಹ ಕಾರ್ಯದರ್ಶಿ ತಿಮ್ಮಪ್ಪ ಬಾನು ತೇಜ, ಖಜಾಂಚಿ ಶ್ಯಾಮ್ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಜಿ.ಆರ್ ಸಾಗರ್, ವೈ. ಗೌತಮ್, ಟ್ರಸ್ಟಿಗಳಾದ ಅವಿನಾಶ್, ವಿ. ಯತಿರಾಜ್, ಚೇತನ್‌ಕುಮಾರ್, ಚಂದ್ರಶೇಖರ್, ಕರಿಯಪ್ಪ, ಯಲ್ಲಪ್ಪ ಮತ್ತು ಸಿ. ಕಾಶಿ ಹಾಗು ಸೇವಾಕರ್ತರು, ಊರಿನ ಪ್ರಮುಖರು ಉಪಸ್ಥಿತರಿದ್ದರು. 
 

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.