ಭದ್ರಾವತಿ : ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ನಗರಸಭೆ ವತಿಯಿಂದ ಆರ್‌ಐಡಿಎಫ್ ಟ್ರಾಂಚ್ ೩೦ ಯೋಜನೆಯಡಿ ನಗರದಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದ್ದು, ಮೇ.೧೭ರಂದು ಬೆಳಿಗ್ಗೆ ೧೧ ಗಂಟೆಗೆ ರಂಗಪ್ಪ ವೃತ್ತ ಸಮೀಪದ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿರುವರು. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಾರದ ಪೂರ್‍ಯಾನಾಯ್ಕ, ಎಸ್.ಎಲ್ ಭೋಜೆಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ನಿಗಮ ಮಂಡಳಿಗಳ ಅಧ್ಯಕ್ಷರಾದ ಜಿ. ಪಲ್ಲವಿ, ರವಿಕುಮಾರ್, ಎಚ್.ಎಸ್ ಸುಂದರೇಶ್, ಆರ್.ಎಂ ಮಂಜುನಾಥಗೌಡ, ಡಾ. ಅಂಶುಮಂತ್, ಎಸ್. ಚಂದ್ರಭೂಪಾಲ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸದಸ್ಯೆ ಅನುಸುಧಾ ಮೋಹನ್ ಪಳನಿ, ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.