Saturday, June 7, 2025

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ೧೨೪ ಮಂದಿಗೆ ತಪಾಸಣೆ

ಭದ್ರಾವತಿಯಲ್ಲಿ ರೋಟರಿ ಕ್ಲಬ್ ಮತ್ತು ವೀರಶೈವ ಲಿಂಗಾಯಿತ ಮಹಿಳಾ ಸಮಾಜ, ಶಾಶ್ವತಿ ಮಹಿಳಾ ಸಮಾಜ ಹಾಗು ವೀರಶೈವ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆ ವತಿಯಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಮೂಳೆ ಸಾಂದ್ರತಾ ಪರೀಕ್ಷೆ ಶಿಬಿರದಲ್ಲಿ ಪಾಲ್ಗೊಂಡಿದ್ದ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ನಗರದ ರೋಟರಿ ಕ್ಲಬ್ ಮತ್ತು ವೀರಶೈವ ಲಿಂಗಾಯಿತ ಮಹಿಳಾ ಸಮಾಜ, ಶಾಶ್ವತಿ ಮಹಿಳಾ ಸಮಾಜ ಹಾಗು ವೀರಶೈವ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆ ವತಿಯಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಮೂಳೆ ಸಾಂದ್ರತಾ ಪರೀಕ್ಷೆ ಶಿಬಿರದಲ್ಲಿ ಸುಮಾರು ೧೨೪ ಮಂದಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು. 
    ಶಿಬಿರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ನಡೆಯಿತು. ಬಿ.ಪಿ, ಶುಗರ್, ಇಸಿಜಿ, ಹೃದಯ ಸಂಬಂಧ ಪರೀಕ್ಷೆ ಹಾಗು ರಕ್ತ ಪರೀಕ್ಷೆ ಮತ್ತು ತಜ್ಞ ವೈದ್ಯರುಗಳಿಂದ ಸಮಾಲೋಚನೆ ನಡೆಯಿತು. 
    ಎನ್‌ಸಿಆರ್ ಹೆಲ್ತ್ ಕೇರ್ ಇಂಡಿಯಾದ ಕುಲಕರ್ಣಿಯವರು ಮೂಳೆ ಸಾಂದ್ರತೆ ಪರೀಕ್ಷೆ ನಡೆಸಿದರು. ಉಳಿದಂತೆ ನಾರಾಯಣ ಹೃದಯಾಲಯ ಆಸ್ಪತ್ರೆ ವೈದ್ಯರಾದ ಡಾ. ವಿವೇಕ್ ಮತ್ತು ಡಾ. ಯಶಸ್‌ರವರು ಹೃದಯ ಸಂಬಂಧಿ ಕಾಯಿಲೆಗಳ ಕುರಿತು ತಪಾಸಣೆ ನಡೆಸುವ ಮೂಲಕ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. 
    ಆಸ್ಪತ್ರೆ ಮಾರುಕಟ್ಟೆ ವಿಭಾಗದ ಗಣೇಶ್, ನರ್ಸ್‌ಗಳಾದ ಚಂದ್ರಕಲಾ, ತಾಯಿಷಾ, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ಅಧ್ಯಕ್ಷೆ ನಾಗರತ್ನ ಕೋಠಿ, ಗೌರವಾಧ್ಯಕ್ಷೆ ಆರ್.ಎಸ್ ಶೋಭಾ, ಉಪಾಧ್ಯಕ್ಷೆ ವಿಜಯ ಜಗನ್ನಾಥ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪಾರಾವ್, ಗೌರವಾಧ್ಯಕ್ಷೆ ಯಶೋಧವೀರಭದ್ರಪ್ಪ, ಪ್ರಮುಖರಾದ ವಾಗೀಶ್‌ಕೋಠಿ, ಅಖಿಲ ಭಾರತ ವೀರಶೈವ ಸಮಾಜದ ನಿರ್ದೇಶಕಿ ಉಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿಶ್ವ ಪರಿಸರ ದಿನ, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ವಿಶಿಷ್ಟ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ 

ಭದ್ರಾವತಿ ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ : ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಕಾಗದನಗರ ಪಶ್ಚಿಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಪೆನ್ಸಿಲ್, ಪೆನ್ ಸೇರಿದಂತೆ ಇನ್ನಿತರ ಲೇಖನ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು ೧೦ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಂಪನ್ಮೂಲ ವ್ಯಕ್ತಿಳಾದ ದಯಾನಂದ್ ಮತ್ತು ಸಿ. ಚನ್ನಪ್ಪ, ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾ, ಸಹಾಯಕ ಉಪ ನಿರೀಕ್ಷಕ ಕೃಷ್ಣಮೂರ್ತಿ, ಸಂಚಾರಿ ಪೊಲೀಸ್ ಠಾಣೆಯ ಹಸಿರು ಯೋಧ ಹಾಲೇಶಪ್ಪ, ಹೋಂ ಆಫ್ ಹೋಂ ಜನಸ್ನೇಹಿ ಆಶ್ರಮದ ರಾಜುನಾಯ್ಕ ಕನ್ನಡಿಗ, ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ಸಂಸ್ಥಾಪಕ ಪ್ರಶಾಂತ್, ಯುವ ಮುಖಂಡರಾದ ವಿಜಯ್, ತೀರ್ಥೇಶ್, ಶರತ್, ರಂಗಸ್ವಾಮಿ, ಎಂ.ಡಿ ಸಲ್ಮಾನ್, ಅಮ್ಜದ್, ಶಶಿಯೋಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಹಸೀಲ್ದಾರ್ ವಸತಿ ಗೃಹ ಆವರಣದಲ್ಲಿ ಪರಿಸರ ದಿನ ಆಚರಣೆ


ಭದ್ರಾವತಿ ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. 
    ಭದ್ರಾವತಿ : ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. 
    ತಹಸೀಲ್ದಾರ್ ಪರುಸಪ್ಪ ಕುರುಬರ ಸಸಿ ನೆಡುವ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕಾಳಜಿವಹಿಸಬೇಕೆಂದರು. ಉಪ ತಹಸೀಲ್ದಾರ್‌ಗಳಾದ ಎ.ವಿ ರಾಜ್ ಅರಸ್, ಗಿರಿರಾಜ್, ಮಂಜಾನಾಯ್ಕ, ರಾಜಸ್ವ ನಿರೀಕ್ಷಕರಾದ ಎಸ್. ರಾಜು, ಕೆ.ಆರ್ ಪ್ರಶಾಂತ್, ಜಿ.ಆರ್ ಜಗನ್ನಾಥ್, ಎನ್‌ಎಸ್‌ಯುಐ ಗೌರವಾಧ್ಯಕ್ಷ ಆರ್. ಮುರುಗೇಶ್ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.