
ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶನಿವಾರ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಭದ್ರಾವತಿ : ಸರ್ಕಾರಿ ಶಾಲೆ ಮಕ್ಕಳು ಸಹ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ಇದಕ್ಕೆ ಪೂರಕವಾಗುವಂತೆ ಶಿಕ್ಷಣದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಮಾಜ ಸೇವಕಿ ಆಶಾರಾಣಿ ಧರ್ಮೇಂದ್ರ ಹೇಳಿದರು.
ಅವರು ಶನಿವಾರ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಮೂಲಕ ತಾಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೩, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೨ ಹಾಗು ನಾಗತಿಬೆಳಗಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೧೧ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು. ಎಲ್ಲರೂ ಹೆಚ್ಚಿನ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು. ಆಗ ಸಮಾಜದಲ್ಲಿ ಗೌರವದಿಂದ, ನೆಮ್ಮದಿಯಿಂದ ಬದಕಲು ಸಾಧ್ಯ. ಸರ್ಕಾರಿ ಶಾಲೆ ಮಕ್ಕಳು ಸಹ ಪ್ರತಿಭಾವಂತರಾಗಿದ್ದು, ಸಮಾಜದಲ್ಲಿ ಹೆಚ್ಚಿನ ಪ್ರೋತ್ಸಾಹ ಲಭಿಸಬೇಕೆಂದರು.
ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಎ. ಧಮೇಂದ್ರ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಡಿಮೆ ಇಲ್ಲದಂತೆ ಶಿಕ್ಷಣಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ. ಇದಕ್ಕೆ ಪೂರಕವಾಗುವಂತೆ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಉಚಿತ ನೋಟ್ ಪುಸ್ತಕಗಳನ್ನು ಕಳೆದ ೮ ವರ್ಷಗಳಿಂದ ವಿತರಿಸಿಕೊಂಡು ಬರಲಾಗುತ್ತಿದೆ ಎಂದರು.
ಭದ್ರಾವತಿ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಧಮೇಂದ್ರ-ಆಶಾರಾಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ, ಬಗರ್ ಹುಕುಂ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ಇನ್ನಿತರರು ಸಮಾಜ ಸೇವಕ ಎ. ಧಮೇಂದ್ರ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಅರಳಿಹಳ್ಳಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ದಿವಾಕರ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಶಿಕ್ಷಕ ವರ್ಗದವರು, ಸಿಬ್ಬಂದಿ ವರ್ಗದವರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಗ್ರಾಮಗಳ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಧಮೇಂದ್ರ-ಆಶಾರಾಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಹರೀಶ್, ದೇವರಾಜ, ಭವಾನಿ ಶಂಕರ್(ಕೂಡ್ಲಿಗೆರೆ), ಗೌಸ್‌ಫೀರ್, ಶ್ರೀನಿವಾಸ್, ವಿಜಯ್, ಚಂದ್ರ, ಭವಾನಿ ಶಂಕರ್(ಕುಮರಿ ನಾರಾಯಣಪುರ), ಷಣ್ಮುಖ, ರುದ್ರಮುನಿ, ಸುರೇಶ್, ಯೋಗೇಶ್, ಜ್ಯೋತಿ, ಗೀತಾ, ರೇಣುಕಾ, ರಾಧ, ರೂಪಕಲಾ ಮತ್ತು ಸುಧಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.