ಗುರುವಾರ, ಜೂನ್ 19, 2025

ಜಯಮ್ಮ ನಿಧನ

ಜಯಮ್ಮ 
    ಭದ್ರಾವತಿ : ತಾಲೂಕು ಜಂಗಮ ಸಮಾಜದ ಅಧ್ಯಕ್ಷ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಎಸ್. ಅಡವೀಶಯ್ಯನವರ ಧರ್ಮಪತ್ನಿ ಜಯಮ್ಮ(೬೮) ಗುರುವಾರ ಸಂಜೆ ನಿಧನ ಹೊಂದಿದರು. 
    ಪತಿ ಎಸ್. ಅಡವೀಶಯ್ಯ, ೪ ಜನ ಪುತ್ರಿಯರು, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. 
    ಇವರ ನಿಧನಕ್ಕೆ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ, ಜಂಗಮ ಸಮಾಜದ ಪ್ರಮುಖರು, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರರು, ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಜೂ.೨೦ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.೨೦ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಬಿಆರ್‌ಪಿ, ಕುವೆಂಪು ವಿಶ್ವವಿದ್ಯಾಲಯ, ಸಿಂಗನಮನೆ, ಶಾಂತಿನಗರ, ಶಂಕರಘಟ್ಟ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ತಮ್ಮಡಿಹಳ್ಳಿ, ಮಲ್ಲಿಗೇನಹಳ್ಳಿ, ಮಲ್ಲಿಗೇನಹಳ್ಳಿ ಕ್ಯಾಂಪ್, ವದಿಯೂರು, ಗ್ಯಾರೇಜ್ ಕ್ಯಾಂಪ್, ಎಚ್.ಕೆ ಜಂಕ್ಷನ್, ಹುಣಸೇಕಟ್ಟೆ, ರಂಗನಾಥಪುರ, ಗೌಳಿಗರ ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ. 

ಜೂ.೨೨ರಂದು ಹಿಂದುತ್ವ ಪುಸ್ತಕ ಕುರಿತು ಸಂವಾದ

    ಭದ್ರಾವತಿ: ಮಂಥನ ಭದ್ರಾವತಿ ವತಿಯಿಂದ ಹಿಂದುತ್ವ ಪುಸ್ತಕದ ಕುರಿತು ಸಂವಾದ ಜೂ.೨೨ರಂದು ಸಂಜೆ ೬ ಗಂಟೆಗೆ ಹಳೇನಗರದ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ, ಹವ್ಯಾಸಿ ಲೇಖಕ ಶೈಲೇಶ್ ಕುಲಕರ್ಣಿ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್ ಉಪಸ್ಥಿತರಿರುವರು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಂಥನ ಭದ್ರಾವತಿ ತಂಡದವರು ಕೋರಿದ್ದಾರೆ. 

ಶಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರ ಬಿಡುಗಡೆ

ಭದ್ರಾವತಿ ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಭದ್ರಾವತಿ : ಭಾರತೀಯ ಜನತಾ ಪಕ್ಷದ  ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಪಕ್ಷದ ಜಿಲ್ಲಾ ಉಪಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಜಿ. ಆನಂದಕುಮಾರ್ ಭಾವಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಜೂ.೨೩ ಶಾಮ್ ಪ್ರಸಾದ್‌ರವರ ಬಲಿದಾನದ ದಿನವಾಗಿದೆ. ಅಂದು ಪ್ರತಿ ಬೂತ್‌ನಲ್ಲೂ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಮರ್ಪಿಸಬೇಕು. ಅವರ ಆದರ್ಶತನ ಯುವ ಸಮುದಾಯಕ್ಕೆ ತಿಳಿಸಿಕೊಡಬೇಕೆಂದರು.
    ಪಕ್ಷದ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಕಾರ್ಯಕ್ರಮದ ಸಂಚಾಲಕರಾದ ರಘುರಾವ್, ತೀರ್ಥಪ್ಪ, ಸುಬ್ರಮಣ್ಯ ( ಸುಬ್ಬಣ್ಣ ), ಹಿರಿಯ ಕಾರ್ಯಕರ್ತರಾದ  ನಂಜಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕಾರ್ಯಕ್ರಮದ ಅಂತಿಮ ಘಟ್ಟದ ಬೈಠಕ್‌ನಲ್ಲಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಭಾವಸಾರ ಕ್ಷತ್ರಿಯ ಸಮಾಜದಿಂದ ಜೂ.೨೨ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

    ಭದ್ರಾವತಿ : ನಗರದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಜೂ.೨೨ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. 
    ನುರಿತ ವೈದ್ಯರುಗಳಿಂದ ಉಚಿತ ಹೃದ್ರೋಗ, ಮಧುಮೇಹ ಮತ್ತು ರಕ್ತದೊತ್ತಡ ಕಾಯಿಲೆಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದ್ದು, ಅಲ್ಲದೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಆರ್. ಶಾಂತಲರವರು ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ.