ಆರ್‌ಎಎಫ್ ಬೆಟಾಲಿಯನ್‌ನಲ್ಲಿ ಮಾದಕ ವಸ್ತುಗಳ ವಿರೋಧಿ ದಿನ ಆಚರಣೆ
ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ೯೭ನೇ ಬೆಟಾಲಿಯನ್ ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಮಾಂಡರ್-೨ ಸಂತೋರವರು ಮಾತನಾಡಿದರು.
ಭದ್ರಾವತಿ: ನಗರದ ಮಿಲ್ಟ್ರಿಕ್ಯಾಂಪ್ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ೯೭ನೇ ಬೆಟಾಲಿಯನ್ ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಚರಿಸಲಾಯಿತು.
ಬೆಟಾಲಿಯನ್ ಕಮಾಂಡರ್-೨(ಪಿಪಿಎಂಜಿ) ಸಂತೋರವರು ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿ, ಇತ್ತೀಚೆಗೆ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿರುವ ಸುದ್ದಿಗಳು ಕೇಳಿ ಬರುತ್ತಿವೆ. ಇದರಿಂದಾಗಿ ದೇಶದ ಭವಿಷ್ಯದ ಪ್ರಜೆಗಳಾದ ಯುವಕರ ಬದುಕು ಹಾಗು ಕುಟುಂಬಗಳು ನಾಶವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಯುವ ಸಮೂಹ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದಾಗ ಮಾತ್ರ ದೇಶ ಸುಭಿಕ್ಷೆಯಾಗುತ್ತದೆ. ಈ ದಿಸೆಯಲ್ಲಿ ಯುವ ಸಮೂಹ ಸೇರಿದಂತೆ ದೇಶದ ಭದ್ರತೆಗಾಗಿ ಪ್ರತಿಯೊಬ್ಬ ನಾಗರಿಕರು ಶ್ರಮವಹಿಸಿ ಮಾದಕ ವಸ್ತುಗಳನ್ನು ತೊಲಗಿಸಬೇಕಾಗಿದೆ ಎಂದು ಕರೆ ನೀಡಿದರು.
ಕಮಾಂಡರ್-೨ ಸಚಿನ್ ಗಾಯಕ್ವಾಡ್, ಉಪ ಕಮಾಂಡರ್ ರಮೇಶ್ ಸಿಂಗ್, ಸಹಾಯಕ ಕಮಾಂಡರ್ ಅನಿಲ್‌ಕುಮಾರ್ ಮುಂತಾದವರು ಉಪಸ್ಥಿತದ್ದರು.