Sunday, July 13, 2025

ಬಿ.ಎಸ್ ಗಣೇಶ್ ಭವಿಷ್ಯದ ರಾಜಕಾರಣದ ಯುವ ನಾಯಕ

ಬ್ಲಾಕ್ ಕಾಂಗ್ರೆಸ್‌ನಿಂದ ಅಭಿನಂದನಾ ಕಾರ್ಯಕ್ರಮ 

ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಯುವ ಮುಖಂಡ ಬಿ.ಎಸ್ ಗಣೇಶ್ ಅವರನ್ನು ಭಾನುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಅಭಿನಂದಿಸಲಾಯಿತು. 
    ಭದ್ರಾವತಿ : ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಯುವ ಮುಖಂಡ ಬಿ.ಎಸ್ ಗಣೇಶ್ ಅವರನ್ನು ಭಾನುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಅಭಿನಂದಿಸಲಾಯಿತು. 
    ಭಾನುವಾರ ಸಂಜೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಗಣೇಶ್‌ರವನ್ನು ಅಭಿನಂದಿಸಿ ಮಾತನಾಡಿದ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಅವರು, ಯುವ ಮುಖಂಡರಾದ ಗಣೇಶ್‌ರವರು ಕ್ಷೇತ್ರದ ಭವಿಷ್ಯದ ರಾಜಕಾರಣದ ಯುವ ನಾಯಕರಾಗಿದ್ದಾರೆ. ಇವರಿಗೆ ಭವಿಷ್ಯದಲ್ಲಿ ಇನ್ನೂ ಉತ್ತಮ ಅವಕಾಶಗಳು ಲಭಿಸುವ ಮೂಲಕ ಉನ್ನತ ಸ್ಥಾನಕ್ಕೇರುವಂತಾಗಲಿ ಎಂದು ಆಶಿಸಿದರು. 
    ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು. 

ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಗಾಗಿ `ನಮ್ಮ ಕ್ಲಿನಿಕ್' ಆರಂಭ

ಸದ್ಬಳಕೆ ಮಾಡಿಕೊಳ್ಳಲು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕರೆ 

ಭದ್ರಾವತಿ ನ್ಯೂಟೌನ್ ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್‌ನಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ನಗರಭೆ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ `ನಮ್ಮ ಕ್ಲಿನಿಕ್' ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿ ಮಾತನಾಡಿದರು. 
    ಭದ್ರಾವತಿ: ಸರ್ಕಾರಿ ಆಸ್ಪತ್ರೆ ಎಂಬ ಮನೋಭಾವನೆಯಿಂದ ಹೊರಬಂದು ಪ್ರತಿಯೊಬ್ಬರು `ನಮ್ಮ ಕ್ಲಿನಿಕ್' ಸೇವೆಯನ್ನು ಪಡೆಯುವ ಮೂಲಕ ಸದ್ಬಳಕೆ ಮಾಡಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು. 
    ಅವರು ಭಾನುವಾರ ನ್ಯೂಟೌನ್, ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್‌ನಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಮತ್ತು ನಗರಭೆ ವತಿಯಿಂದ ನೂತನವಾಗಿ ಆರಂಭಿಸಲಾಗಿರುವ `ನಮ್ಮ ಕ್ಲಿನಿಕ್' ಉದ್ಘಾಟಿಸಿ ಮಾತನಾಡಿದರು. 
    ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ಉತ್ತಮ ಮೂಲ ಸೌಕರ್ಯ, ಉತ್ತಮ ಆಹಾರ ಮತ್ತು ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಮುಂದಾಗಿದೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಪ್ರತಿಯೊಂದು ಯೋಜನೆಗಳು ಇಂದು ಇಡೀ ದೇಶಕ್ಕೆ ಮಾದರಿಯಾಗುತ್ತಿವೆ. ಪ್ರತಿಯೊಬ್ಬರ ಮನೆಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಕಡುಬಡವರು, ಕೂಲಿಕಾರ್ಮಿಕರು ಹೆಚ್ಚಾಗಿ ವಾಸಿಸುತ್ತಿರುವ ನಗರಸಭೆ ವ್ಯಾಪ್ತಿಯ ಹೊಸಮನೆ ಹನುಮಂತ ನಗರ ಮತ್ತು ಆಂಜನೇಯ ಅಗ್ರಹಾರ, ಕೂಲಿಬ್ಲಾಕ್ ಶೆಡ್‌ನಲ್ಲಿ ಎರಡು ಕಡೆ `ನಮ್ಮ ಕ್ಲಿನಿಕ್' ಆರಂಭಿಸುವಂತೆ ಶಾಸಕರು ಸರ್ಕಾರಕ್ಕೆ ಕೋರಿದ್ದರು. ಅದರಂತೆ ಇದೀಗ ಕ್ಲಿನಿಕ್ ಆರಂಭಿಸಲಾಗುತ್ತಿದೆ ಎಂದರು. 
    ವೈದ್ಯರು, ಸಿಬ್ಬಂದಿಗಳು ಕ್ಲಿನಿಕ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಲು ಅಗತ್ಯವಿರುವ ಎಲ್ಲಾ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದರು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಸರ್ವಮಂಗಳ, ರೂಪಾವತಿ, ಬಸವರಾಜ್ ಬಿ. ಆನೇಕೊಪ್ಪ, ಐ.ವಿ ಸಂತೋಷ್ ಕುಮಾರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಮುಖಂಡರಾದ ಬಿ.ಕೆ ಜಗನ್ನಾಥ್, ಎಸ್.ಎಸ್ ಭೈರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಜಿಲ್ಲಾ ಆರೋಗ್ಯ ಅಧಿಕಾರಿ ಓ. ಮಲ್ಲಪ್ಪ, ಹಿರಿಯ ಆರೋಗ್ಯ ಸಹಾಯಕರಾದ ನಿಲೇಶ್ ರಾಜ್, ಆನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಸದಸ್ಯ ಚನ್ನಪ್ಪ ಸ್ವಾಗತಿಸಿದರು. 

ನ್ಯಾಯಾಲಯದ ಲೋಕ ಅದಾಲತ್‌ನಲ್ಲಿ ೨೦೨೩ ಪ್ರಕರಣಗಳು ಇತ್ಯರ್ಥ

ಭದ್ರಾವತಿ ೪ನೇ ಹೆಚ್ಚುವರಿ ಜಿಲ್ಲಾ ಸತ್ರನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್  ಹಾಗೂ ವಕೀಲರು ಮತ್ತು ಕಕ್ಷೀದಾರರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. 
    ಭದ್ರಾವತಿ: ನಗರದ ನ್ಯಾಯಾಲಯದಲ್ಲಿ ಜರುಗಿದ ಬೃಹತ್ ಲೋಕ ಅದಾಲತ್‌ನಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಸೇರಿದಂತೆ ವಿವಿಧ ರೀತಿಯ ೨೦೨೩ ವ್ಯಾಜ್ಯ ಪ್ರಕರಣಗಳು ಇತ್ಯರ್ಥಗೊಂಡಿದ್ದು, ನಿರೀಕ್ಷೆಯಂತೆ ಲೋಕ ಅದಾಲತ್ ಬಹುತೇಕ ಯಶಸ್ವಿಯಾಗಿದೆ. 
    ವಿವಿಧ ಶ್ರೇಣಿಯ ನ್ಯಾಯಾಲಯಗಳಲ್ಲಿ ವಿಲೇವಾರಿಗೆ ಬಾಕಿ ಉಳಿದಿದ್ದ ಸಿವಿಲ್ ಮತ್ತು ಕ್ರಿಮಿನಲ್ ಸೇರಿದಂತೆ ವಿವಿಧ ರೀತಿಯ ೨೦೨೩ ವ್ಯಾಜ್ಯ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು. ಈ ಪೈಕಿ ಹಣಕಾಸಿನ ಸಂಬಂಧದ ಪ್ರಕರಣಗಳಲ್ಲಿ ೫,೪೨,೮೨,೭೯೦ ರು. ಪಾವತಿಸಲಾಯಿತು.
    ಲೋಕ ಅದಾಲತ್ ವಿವರ:
    ೪ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ರವರು ೧೯ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೨೩,೪೬,೨೩೯ ರು. ಹಾಗು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ೧೯ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೧,೪೭,೩೦,೬೪೦ ರು. ಮತ್ತು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರರವರ ಸಮ್ಮುಖದಲ್ಲಿ ೨೮೧ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೧,೪೭,೬೩,೪೯೮ ರು. ಪಾವತಿಸಲಾಯಿತು. 
    ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ರವಿಕುಮಾರ್‌ರವರ ಸಮ್ಮುಖದಲ್ಲಿ ೫೨೦ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೨೩,೯೨,೮೪೯ ರು. ಹಾಗು ೧ನೇ ಹೆಚ್ಚುವರಿ ಸಿವಿಲ್‌ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ರವಿಕುಮಾರ್‌ರವರು ೫೩೫ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ, ೪೩,೬೫,೧೫೨ ರು. ಪಾವತಿಸಲಾಯಿತು. 
    ೨ನೇ ಹೆಚ್ಚುವರಿ ಸಿವಿಲ್‌ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶೃತಿರವರ ಸಮ್ಮುಖದಲ್ಲಿ ೫೮೦ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ, ೬೪,೦೮,೦೧೫ ರು. ಹಾಗು ೩ನೇ ಹೆಚ್ಚುವರಿ ಸಿವಿಲ್‌ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಶೃತಿರವರ ಸಮ್ಮುಖದಲ್ಲಿ ೪೭೯ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೨೯,೫೮,೭೩೪ ರು. ಮತ್ತು ೪ನೇ ಹೆಚ್ಚುವರಿ ಸಿವಿಲ್‌ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಗಿರಿಜಾರವರ ಸಮ್ಮುಖದಲ್ಲಿ ೪೭೦ ಪ್ರಕರಣಗಳು ರಾಜಿಸಂಧಾನದ ಮೂಲಕ ಇತ್ಯರ್ಥಗೊಳಿಸಿ ೬೩,೧೭,೬೬೩ ರು. ಪಾವತಿಸಲಾಯಿತು. 

ಕನಕ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆ

ಭದ್ರಾವತಿ ಹಳೇನಗರ, ಶ್ರೀ ಬಸವೇಶ್ವರ ವೃತ್ತ, ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ಭದ್ರಾವತಿ : ಹಳೇನಗರ, ಶ್ರೀ ಬಸವೇಶ್ವರ ವೃತ್ತ, ತಾಲೂಕು ಕುರುಬರ ಸಂಘ ಆಶ್ರಿತದ ಶ್ರೀ ಕನಕ ವಿದ್ಯಾ ಸಂಸ್ಥೆ ಆವರಣದಲ್ಲಿ ಗುರು ಪೂರ್ಣಿಮೆ ಅಂಗವಾಗಿ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಕನಕದಾಸರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ವಿದ್ಯಾಸಂಸ್ಥೆ ವತಿಯಿಂದ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗುರುಪೂರ್ಣಿಮೆ ಆಚರಿಸಲಾಯಿತು. 
    ವಿದ್ಯಾಸಂಸ್ಥೆ ಮಕ್ಕಳಿಗೆ ಗುರುವಂದನಾ ಕಾರ್ಯಕ್ರಮದ ವಿಶೇಷತೆ ಹಾಗು ಗುರುಗಳ ಮಹತ್ವ ತಿಳಿಸಿಕೊಡಲಾಯಿತು. ನಂತರ ಸಿಹಿ ಹಂಚಲಾಯಿತು. 
    ಸಂಘದ ಉಪಾಧ್ಯಕ್ಷ ಬಿ.ಎಸ್ ಮಂಜುನಾಥ್, ಕಾರ್ಯದರ್ಶಿ ಕೆ.ಎನ್ ರಾಜೇಶ್ ಹಾಗು ವಿದ್ಯಾಸಂಸ್ಥೆ ಮುಖ್ಯೋಪಾಧ್ಯಾಯರಾದ ಸಿ.ಡಿ ಮಂಜುನಾಥ್ ಮತ್ತು ಹರೀಶ್ ಹಾಗು ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.