
ಭದ್ರಾವತಿಯಲ್ಲಿ ಬಿ.ವೈ ರಾಘವೇಂದ್ರ ಅಭಿಮಾನಿ ಬಳಗದಿಂದ ಬುಧವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ, ಆನಂದ ಸಾಮಾಜಿಕ ಸೇವಾ ಸಂಸ್ಥೆ ಅಧ್ಯಕ್ಷ ಜಿ. ಆನಂದಕುಮಾರ್ ಮಾತನಾಡಿದರು.
ಭದ್ರಾವತಿ: ಸಂಸದ ಬಿ.ವೈ ರಾಘವೇಂದ್ರರವರ ಹುಟ್ಟುಹಬ್ಬದ ಪ್ರಯುಕ್ತ ಆ.೧೬ರಂದು ನಗರದ ಬಿ.ವೈ ರಾಘವೇಂದ್ರ ಅಭಿಮಾನಿ ಬಳಗದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ನಗರಸಭೆ ಮಾಜಿ ಸದಸ್ಯ, ಆನಂದ ಸಾಮಾಜಿಕ ಸೇವಾ ಸಂಸ್ಥೆ ಅಧ್ಯಕ್ಷ ಜಿ. ಆನಂದಕುಮಾರ್ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸದ ಬಿ.ವೈ ರಾಘವೇಂದ್ರರವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂಬ ಆಶಾಭಾವನೆ ನಮ್ಮದಾಗಿದೆ. ಅವರ ಅಭಿಮಾನಿ ಬಳಗದಿಂದ ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿದೆ ಎಂದರು.
ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ ೮.೩೦ಕ್ಕೆ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಜಿ. ಆನಂದಕುಮಾರ್ ಮತ್ತು ತಂಡದಿಂದ ಕುಂಕುಮಾರ್ಚನೆ, ೯ಕ್ಕೆ ಬಿ.ಎಚ್ ರಸ್ತೆ, ಕಡದಕಟ್ಟೆ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ೯.೩೦ಕ್ಕೆ ರವಿ ಮತ್ತು ಸ್ನೇಹಿತರಿಂದ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ೧೧ ಗಂಟೆಗೆ ಪ್ರಸನ್ನ ಮತ್ತು ಸ್ನೇಹಿತರಿಂದ ಬಾರಂದೂರು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗು ಪ್ರಸಾದ ವಿನಿಯೋಗ ಮತ್ತು ಮಧ್ಯಾಹ್ನ ೧ಕ್ಕೆ ಮಂಗೋಟೆ ರುದ್ರೇಶ್ ಮತ್ತು ಸಾಗರ್ ಅವರಿಂದ ತಾಲೂಕಿನ ದೊಡ್ಡೇರಿ, ಉದ್ದಾಮ ಕ್ಷೇತ್ರ ಶ್ರೀ ಉದ್ದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ ಎಂದರು.
ಈ ನಡುವೆ ಬೆಳಿಗ್ಗೆ ೮ ಗಂಟೆಗೆ ತಮಿಳು ಯೂತ್ಸ್ ಅಸೋಸಿಯೇಷನ್ ವತಿಯಿಂದ ತಿಂಡಿ ವ್ಯವಸ್ಥೆ, ೧೦ ಗಂಟೆಗೆ ತಾಲೂಕಿನ ಹೊಸಮನೆ, ಗುಡ್ಡದ ನೇರಲೇಕೆರೆ, ಸಿಂಗನಮನೆ ಮತ್ತು ಕೂಡ್ಲಿಗೆರೆ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ಪೆನ್ ವಿತರಣೆ, ಮಧ್ಯಾಹ್ನ ನ್ಯೂಟೌನ್ ತರಂಗ ಕಿವುಡು ಮಕ್ಕಳ ಶಾಲೆ ಹಾಗು ಸಿದ್ದಾರ್ಥ ಅಂಧರ ಕೇಂದ್ರ ಮತ್ತು ಬೊಮ್ಮನಕಟ್ಟೆ ಹೋಂ ಆಫ್ ಹೋಂ ಜನಸ್ನೇಹಿ ಸೇವಾ ಟ್ರಸ್ಟ್ ನಿರಾಶ್ರಿತರ ಆಶ್ರಮ ಹಾಗು ಬೈಪಾಸ್ ರಸ್ತೆ, ಎಂಪಿಎಂ ಬಡಾವಣೆಯ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ಸಿಹಿ ಮತ್ತು ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದರು.
ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಿಂದ ಹುಟ್ಟುಹಬ್ಬ ಆಚರಣೆ, ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ಧರ್ಮಶಾಸ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಂಜೆ ೬ಕ್ಕೆ ವಿಶೇಷ ಪೂಜೆ, ಪ್ರಸಾದ ವ್ಯವಸ್ಥೆ ಹಾಗು ರಾತ್ರಿ ೮ಕ್ಕೆ ನ್ಯೂಟೌನ್ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಸಾದ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ. ಆನಂದಕುಮಾರ್, ದುಗ್ಗೇಶ್ ತೇಲ್ಕರ್, ಹನುಮಂತನಾಯ್ಕ, ಮಂಗೋಟೆ ರುದ್ರೇಶ್, ಬಿ.ಜಿ ರಾಮಲಿಂಗಯ್ಯ, ಛಲವಾದಿ ಕೃಷ್ಣ, ಎಂ. ಮಂಜುನಾಥ್, ರಘುರಾವ್, ಚನ್ನೇಶ್, ವಿನೋದ್ ಕುಮಾರ್, ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.