ಮಂಗಳವಾರ, ಆಗಸ್ಟ್ 19, 2025

೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ

ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಮಂಗಳವಾರ ೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. 
    ಭದ್ರಾವತಿ: ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಮಂಗಳವಾರ ೧೮೬ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.  
    ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಪ್ರತಿ ವರ್ಷ ವಿಶ್ವ ಛಾಯಾಗ್ರಾಹಕರ ದಿನ ಆಚರಿಸಿಕೊಂಡು ಬರಲಾಗುತ್ತಿದೆ. ಆರೋಗ್ಯ ಶಿಬಿರ, ಕ್ರೀಡಾ ಹಾಗು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷವಾಗಿ ನ್ಯೂಟೌನ್ ದಯಾ ಸಾಗರ್ ಟ್ರಸ್ಟ್‌ನಲ್ಲಿ ಬಡವರಿಗೆ, ನಿರ್ಗತಿಕರಿಗೆ ಅನ್ನದಾನ ನೆರವೇರಿಸಲಾಯಿತು.
      ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಚ್. ಶ್ರೀನಿವಾಸ್ ನೇತೃತ್ವ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶೈಲೇಶ್ ಕುಮಾರ್, ಖಜಾಂಚಿ ಜಿ.ಡಿ ಮಂಜುನಾಥ್. ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ .ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. ದಯಾಸಾಗರ್ ಟ್ರಸ್ಟ್ ಅಧ್ಯಕ್ಷ ಆರ್. ಮೋಸಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

೨೫ ವರ್ಷಗಳನ್ನು ಪೂರೈಸಿದ ಮಣಿಪಾಲ ಆರೋಗ್ಯ ಕಾರ್ಡ್ : ನೋಂದಣಿ ಪ್ರಾರಂಭ

ಭದ್ರಾವತಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲ ಆಸ್ಪತ್ರೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮತ್ತು ಪ್ರತಿನಿಧಿ ಅನಿಲ್ ೨೫ನೇ ವರ್ಷದ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿಗೆ ಚಾಲನೆ ನೀಡಿದರು. 
    ಭದ್ರಾವತಿ :  ಮಣಿಪಾಲ್ ಸಂಸ್ಥೆ ಸಂಸ್ಥಾಪಕ ಡಾ. ಟಿ.ಎಂ.ಎ. ಪೈರವರ ದೂರದೃಷ್ಟಿಯ ನಾಯಕತ್ವದಲ್ಲಿ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈರವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ಇದೀಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. ೨೫ ವರ್ಷಗಳಲ್ಲಿ ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ. ಪ್ರಸ್ತುತ  ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭಗೊಂಡಿದ್ದು, ಇದರ ಸದುಪಯೊಗ ಪಡೆದುಕೊಳ್ಳುವಂತೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮನವಿ ಮಾಡಿದರು. 
    ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೦೦ನೇ ಇಸವಿಯಲ್ಲಿ, ೩,೨೦೦ ಕುಟುಂಬಗಳು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ವರ್ಷ ೧.೨೫ ಲಕ್ಷ ಕುಟುಂಬಗಳು ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ಈ ಯೋಜನೆಯಡಿ ೬.೭೨ ಲಕ್ಷ ಸದಸ್ಯರನ್ನು ಹೊಂದಲಾಗಿದೆ. ಈ ಯೋಜನೆಯಿಂದ ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವಾಗುತ್ತಿದೆ ಎಂದರು.  
    ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದು, ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ಧ್ಯೇಯ ವಾಕ್ಯ ಎಂದರು. 
    ಸದಸ್ಯತ್ವ ವಿವರಗಳು: ಮಣಿಪಾಲ್ ಆರೋಗ್ಯ ಕಾರ್ಡ್ ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವ ಒಬ್ಬರಿಗೆ ರು. ೩೫೦, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ. ಅವರ ಸಂಗಾತಿ, ೨೫ ವರ್ಷದೊಳಗಿನ ಮಕ್ಕಳಿಗೆ ರು. ೭೦೦ ಮತ್ತು ಕುಟುಂಬ ಫ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ. ಅವರ ಸಂಗಾತಿ, ೨೫ ವರ್ಷದೊಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರು. ೯೦೦. ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರು. ೬೦೦, ಕುಟುಂಬಕ್ಕೆ ರು. ೯೫೦ ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರು. ೧,೧೦೦  ಆಗಿರುತ್ತದೆ ಎಂದರು. 
    ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‌ದಾರರಿಗೆ ರಿಯಾಯಿತಿ ಪ್ರಯೋಜನಗಳು: 
    ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ ಶೇ.೫೦ ರಿಯಾಯಿತಿ (ಓಪಿಡಿ ದಿನಗಳು) ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ ಶೇ.೨೫ ರಿಯಾಯಿತಿ ರೇಡಿಯಾಲಜಿ, ಓಪಿಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ ಶೇ.೨೦ ರಿಯಾಯಿತಿ, ಡಯಾಲಿಸಿಸ್‌ನಲ್ಲಿ ರು. ೧೦೦ ರಿಯಾಯಿತಿ. ಆಸ್ಪತ್ರೆ ಔಷಧಿಗಳ ಮೇಲೆ ಶೇ. ೧೦ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‌ಗಳಲ್ಲಿ ಶೆ.೨೫ ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ). ನೀಡಲಾಗುತ್ತಿದೆ ಎಂದರು. 
    ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿ ಸಹ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು. 
    ತಾಲೂಕಿನಲ್ಲಿ ಅಧಿಕೃತ ಪ್ರತಿನಿಧಿಗಳ ಬಳಿ ಅರ್ಜಿಗಳನ್ನು ಪಡೆಯಬಹುದಾಗಿದ್ದು, ರಾಜೇಶ್ - ೯೪೪೯೮೧೨೫೨೩ (ಕಸ್ತೂರ್ಬಾ ಆಸ್ಪತ್ರೆಮಾಹಿತಿ ಕೇಂದ್ರ, ಭದ್ರಾವತಿ) ವಿಪ  ಸೌಹಾರ್ದ ೮೧೦೫೮೫೯೧೫೭, ಡಿ. ಶಬರಿವಾಸನ್ ೮೯೦೩೫೬೧೬೧೮೮ ಮತ್ತು ಕಾರುಣ್ಯ ಚಾರಿಟೇಬಲ್ ಟ್ರಸ್ -೯೭೩೧೧೫೭೭೬೧ ಸಂಪರ್ಕಿಸಬಹುದಾಗಿದೆ.  
    ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಮೊ: ೯೯೮೦೮೫೪೭೦೦ / ೦೮೨೦೨೯೨೩೭೪೮ ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು. ಪತ್ರಿಕಾಗೋಷ್ಠಿಯಲ್ಲಿ  ಪ್ರತಿನಿಧಿ ಅನಿಲ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ : ಬೃಹತ್ ಪ್ರತಿಭಟನಾ ಮೆರವಣಿಗೆ

ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಲಾಯಿತು. 
    ಭದ್ರಾವತಿ: ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಲಾಯಿತು. 
    ನಗರದ ಮಾಧವಚಾರ್ ವೃತ್ತದಲ್ಲಿ ವಿವಿಧ ಹಿಂದೂಪರ ಸಂಘನೆಗಳ ಪ್ರಮುಖರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಲಾಗುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ ನಿಲ್ಲಬೇಕು. ಒಳಸಂಚು ನಡೆಸುತ್ತಿರುವವರನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ಆಗ್ರಹಿಸಿದರು. 

ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥನ ಪುಣ್ಯ ಸನ್ನಿಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನಾ ಮೆರವಣೆ ನಡೆಸಿ  ಉಪ ತಹಸೀಲ್ದಾರ್ ಮಂಜಾನಾಯ್ಕ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
    ಬೃಹತ್ ಪ್ರತಿಭಟನೆಯಲ್ಲಿ ಪ್ರಮುಖರಾದ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಜಿ. ಧರ್ಮಪ್ರಸಾದ್, ಕೆ.ಎಚ್ ತೀರ್ಥಯ್ಯ, ಶಾರದ ಅಪ್ಪಾಜಿ, ಗೀತಾ ರಾಜ್‌ಕುಮಾರ್, ಬಿ.ಕೆ ಮೋಹನ್, ಚನ್ನಪ್ಪ, ಆರ್. ಕರುಣಾಮೂರ್ತಿ, ಮಂಗೋಟೆ ರುದ್ರೇಶ್, ಜಯರಾಂ ಗೊಂದಿ, ರಮೇಶ್, ವಿ. ಕದಿರೇಶ್, ಕೆ.ಎನ್ ಶ್ರೀಹರ್ಷ, ಜಿ. ಆನಂದಕುಮಾರ್, ಎಂ. ಮಂಜುನಾಥ್, ತಿಮ್ಮೇಗೌಡ, ಬಿ.ಜಿ ರಾಮಲಿಂಗಯ್ಯ, ಧನುಷ್ ಬೋಸ್ಲೆ, ರಘುರಾವ್, ಹನುಮಂತನಾಯ್ಕ, ಯೋಗೇಶ್  ಗುಜ್ಜರ್, ಶೋಭಾ ಪಾಟೀಲ್, ಸುಲೋಚನಾ, ಕುಸುಮಾ ತೀರ್ಥಯ್ಯ, ಆಶಾ ಪುಟ್ಟಸ್ವಾಮಿ, ಕವಿತಾ ರಾವ್.ಆರ್ ಶೋಭಾ, ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು ಪಾಲ್ಗೊಂಡಿದ್ದರು. 
    ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿ ಉಪ ತಹಸೀಲ್ದಾರ್ ಮಂಜಾನಾಯ್ಕ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.