ಶನಿವಾರ, ಸೆಪ್ಟೆಂಬರ್ 6, 2025

ಜ್ಞಾನವಿಕಾಸ ವಾತ್ಸಲ್ಯ ನಿಧಿ : ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ

ಭದ್ರಾವತಿ ತಾಲೂಕಿನ ಜ್ಞಾನವಿಕಾಸ ವಾತ್ಸಲ್ಯ ನಿಧಿ ಕಾರ್ಯಕ್ರಮದಡಿ ವಾತ್ಸಲ್ಯ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಪರಿಕರಗಳ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ನಡೆಸಲಾಯಿತು. 
    ಭದ್ರಾವತಿ : ತಾಲೂಕಿನ ಜ್ಞಾನವಿಕಾಸ ವಾತ್ಸಲ್ಯ ನಿಧಿ ಕಾರ್ಯಕ್ರಮದಡಿ ವಾತ್ಸಲ್ಯ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ಪರಿಕರಗಳ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ನಡೆಸಲಾಯಿತು. 
  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಗೀತಾ ಪರಿಕರಗಳನ್ನು ವಿತರಿಸಿ ಯೋಜನೆ ವತಿಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶ ಹೊಂದಲಾಗಿದೆ.  ಮಕ್ಕಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯೋಜನೆ ಉದ್ದೇಶ ಸಾರ್ಥಕಗೊಳಿಸಬೇಕೆಂದರು. 
    ಯೋಜನೆ-೧ರ ಯೋಜನಾಧಿಕಾರಿ ಪ್ರಕಾಶ್ ನಾಯ್ಕ್ .ವೈ, ಜ್ಞಾನವಿಕಾಸ ಯೋಜನಾಧಿಕಾರಿ ರತ್ನ ಮತ್ತು ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗು ಫಲಾನುಭವಿಗಳು ಮತ್ತು ವಿದ್ಯಾರ್ಥಿಗಳು ಉಪಸಿತರಿದ್ದರು. 

ಲಕ್ಷ್ಮಮ್ಮ ನಿಧನ

   ಲಕ್ಷ್ಮಮ್ಮ  
ಭದ್ರಾವತಿ: ನಗರದ ಚಾಮೇಗೌಡ ಏರಿಯಾ ನಿವಾಸಿ ಜಮೀನ್ದಾರ್ ದಿವಂಗತ ಬಿ.ಕೆ ನಾರಾಯಣಸ್ವಾಮಿ ಅವರ ಪತ್ನಿ ಲಕ್ಷ್ಮಮ್ಮ(೮೫) ವಯೋ ಸಹಜವಾಗಿ ಶನಿವಾರ ಬೆಳಗಿನ ಜಾವ ಅವರ ನಿವಾಸದಲ್ಲಿ ನಿಧನ ಹೊಂದಿದರು. 
    ಇವರಿಗೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವಾಸು ಮತ್ತು ರವಿ ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರಿದ್ದಾರೆ. ನಗರದ ಹುತ್ತಾ ಕಾಲೋನಿ ಹಿಂದೂ ರುದ್ರ ಭೂಮಿಯಲ್ಲಿ ಸಂಜೆ ಅಂತ್ಯ ಸಂಸ್ಕಾರ ನೆರವೇರಿತು. 
    ಇವರ ನಿಧನಕ್ಕೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಹಾಗು ನೃಪತುಂಗ ಡಾ. ರಾಜ್‌ಕುಮಾರ್ ಅಭಿಮಾನಿಗಳ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. 

ಸೆ.೭ರಂದು ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜಯಂತಿ

    ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ನಾರಾಯಣಗುರು ವಿಚಾರ ವೇದಿಕೆ, ಈಡಿಗ ಸಮಾಜದ ೨೬ ಪಂಗಡಗಳು ಮತ್ತು ಆರ್ಯ ಈಡಿಗ ಮಹಿಳಾ ಸಮಾಜ, ಕೇರಳ ಸಮಾಜ, ಈಡಿಗ ಸಮಾಜ ಹಾಗು ಬಿಲ್ಲವ ಸಮಾಜ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ೧೭೧ನೇ ಜಯಂತಿ ಸೆ.೭ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಬಲ್ಕೀಶ್ ಬಾನು, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಶ್ರೀ ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಇಡಗೊಡು, ತಾಲೂಕು ಅಧ್ಯಕ್ಷ ಎನ್. ನಟರಾಜ್, ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ತಹಸೀಲ್ದಾರ್ ಪರುಸಪ್ಪ ಕುರುಬರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಇ.ಬಿ ಗಣೇಶ್, ಆರ್ಯ ಈಡಿಗ ಮಹಿಳಾ ಸಮಾಜದ ಅಧ್ಯಕ್ಷೆ ಭಾಗ್ಯಮ್ಮ ಪುಟ್ಟಸ್ವಾಮಿಗೌಡ, ಕೇರಳ ಸಮಾಜದ ಅಧ್ಯಕ್ಷ ಗಂಗಾಧರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
    ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ. ಶಿವಮೊಗ್ಗ ಕಸ್ತೂರಿಬಾ ಬಾಲಕಿಯರ ಕಾಲೇಜಿನ ಹಿರಿಯ ಉಪನ್ಯಾಸಕ ಎಸ್.ಎಚ್ ರವಿಕುಮಾರ್ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಸೆ.೭ರಂದು ಚಾತುರ್ಮಾಸ ವ್ರತ ಪೂಜಾನುಷ್ಠಾನದ ಸೀಮೊಲಂಘನ ಕಾರ್ಯಕ್ರಮ



    ಭದ್ರಾವತಿ : ಹಳೇನಗರದ ಶ್ರೀ ಕಾಳಿಕಾಂಬ ಸೇವಾ ಸಮಿತಿ ಹಾಗು ಶ್ರೀ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಸಾವಿತ್ರೀ ಪೀಠಾಧೀಶ್ವರ ಜಗದ್ಗುರು ಅಷ್ಟೋತ್ತರ ಶತಶ್ರೀ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳವರ ೮ನೇ ವರ್ಷದ ಚಾತುರ್ಮಾಸ ವ್ರತ ಪೂಜಾನುಷ್ಠಾನದ ಸೀಮೊಲಂಘನ ಕಾರ್ಯಕ್ರಮ ಸೆ.೭ರ ಭಾನುವಾರ ಹಮ್ಮಿಕೊಳ್ಳಲಾಗಿದೆ. 
    ಬೆಳಿಗ್ಗೆ ೭ ಗಂಟೆಗೆ ವಡ್ಡನಹಾಳ್ ಶ್ರೀ ಮಠದ ಗುರುಕುಟೀರದಿಂದ ಶ್ರೀಗಳು ಹೊರಟು ೮.೩೦ಕ್ಕೆ ಭದ್ರಾನದಿಯಲ್ಲಿ ತೀರ್ಥಸ್ನಾನ ನೆರವೇರಿಸುವರು. ಕಾಳಿಕಾಂಬ ದೇವಸ್ಥಾನಕ್ಕೆ ೯.೩೦ಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುವರು. ನಂತರ ಶ್ರೀಗಳ ಪಾದಪೂಜೆ ನಡೆಯಲಿದೆ. 
    ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕಾಳಿಕಾಂಬ ಸೇವಾ ಸಮಿತಿ ಹಾಗು ಶ್ರೀ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ಶ್ರೀ ಕಾಳಿಕಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಪಿ. ವೆಂಕಟರಮಣ ಶೇಟ್, ವಡ್ಡನಹಾಳ್ ಶ್ರೀ ಮಠದ ಅಧ್ಯಕ್ಷ ಟಿ. ಮಹೇಂದ್ರಚಾರ್, ಶ್ರೀ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಬಿ.ಎಲ್ ನಾಗರಾಜ, ಕಾರ್ಯಾಧ್ಯಕ್ಷ ಸಿ. ರಾಮಾಚಾರಿ, ಶ್ರೀ ಗಾಯಿತ್ರಿ ವಿಶ್ವಕರ್ಮ ಮಹಿಳಾ ಮಂಡಳಿ ಗೌರವಾಧ್ಯಕ್ಷೆ ಭಾಗ್ಯಮ್ಮ ಶಾಂತಾಚಾರ್, ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.