ಭದ್ರಾವತಿ : ನನ್ನ ಮಾತುಗಳಿಂದ ಕ್ಷೇತ್ರದಲ್ಲಿ ಯಾವುದೇ ಧರ್ಮಕ್ಕೆ, ಜಾತಿಗೆ, ಯಾರಿಗೂ ನೋವಾಗಿಲ್ಲ. ಯಾವುದೇ ರೀತಿ ಗೊಂದಲವಿಲ್ಲ, ಸಂಘರ್ಷವಿಲ್ಲ. ಇದು ಕೇವಲ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಗಲಾಟೆ ಅಷ್ಟೆ. ಕ್ಷೇತ್ರದ ಜನರು ಇಂತಹ ಕುತಂತ್ರಗಳಿಗೆ ಕಿವಿಗೊಡುವುದಿಲ್ಲ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದ್ದಾರೆ.
ಕ್ಷೇತ್ರದಲ್ಲಿ ಸರ್ವ ಧರ್ಮಿಯರು ಸುಖ, ಶಾಂತಿ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನವರು ಅನಾವಶ್ಯಕವಾಗಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ಯಾರೂ ಸಹ ಇವರ ಅಪಪ್ರಚಾರಕ್ಕೆ ಕಿವಿಗೊಡುವುದಿಲ್ಲ. ನಾನು ಗೆಲ್ಲಲು ಪ್ರಮುಖವಾಗಿ ಮುಸಲ್ಮಾನರು ಸೇರಿದಂತೆ ಎಲ್ಲಾ ಧರ್ಮದವರು ಕಾರಣರಾಗಿದ್ದಾರೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಠೇವಣಿ ಸಿಗುತ್ತೋ ಇಲ್ವೋ ಗೊತ್ತಿಲ್ಲ . ಹಾಗಾಗಿ ಈ ರೀತಿ ಮುನ್ನೆಲೆಗೆ ಬರಲು ಕಾರಣರಾಗಿದ್ದಾರೆಂದು ದೂರಿದರು.