ಶುಕ್ರವಾರ, ಸೆಪ್ಟೆಂಬರ್ 19, 2025

ಶಾಲಾ ಮಕ್ಕಳಿಗೆ ಉಚಿತ ಪರೀಕ್ಷಾ ಸಾಮಗ್ರಿ ವಿತರಣೆ

ಭದ್ರಾವತಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. 
    ಭದ್ರಾವತಿ: ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹುಡ್ಕೋ ಕಾಲೋನಿ ಪುಟ್ಟು ಮತ್ತು ಸ್ನೇಹಿತರು ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಪರೀಕ್ಷೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. 
    ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಹುಟ್ಟುಹಬ್ಬ ಹಾಗು ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್. ವೆಂಕಟೇಶ್‌ರವರ ತಂದೆ-ತಾಯಿಯವರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಾಮಗ್ರಿಗಳನ್ನು ವಿತರಿಸಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಯಿತು. 
    ಡಿಎಸ್‌ಎಸ್ ಮುಖಂಡ ಪರಮೇಶ್, ನಗರಸಭೆ ಸೂಪರ್‌ವೈಸರ್ ನರಸಿಂಹ, ಸುಬ್ರಮಣಿ, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕರ್ನಾಟಕರತ್ನ, ಸಾಹಸಸಿಂಹ ಡಾ. ವಿಷ್ಣುವರ್ಧನ್ ೭೫ನೇ ಜನ್ಮದಿನ ಆಚರಣೆ

ವಾಹನ ಚಾಲಕರು, ಮಾಲೀಕರು, ಅಭಿಮಾನಿಗಳಿಂದ ರಕ್ತದಾನ 


ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ  ಸಮಿತಿಯಿಂದ ಕರ್ನಾಟಕ ರತ್ನ, ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೫ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ : ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪದ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ  ಸಮಿತಿಯಿಂದ ಕರ್ನಾಟಕ ರತ್ನ, ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೫ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ನಗರದ ಹಾಲಪ್ಪ ವೃತ್ತ, ಜೀವ ಸಂಜೀವಿನಿ ರಕ್ತ ಕೇಂದ್ರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ ವಾಹನ ಚಾಲಕರು, ಮಾಲೀಕರು ಹಾಗು ವಿಷ್ಣುವರ್ಧನ್ ಅಭಿಮಾನಿಗಳು ರಕ್ತದಾನ ಮಾಡುವ ಮೂಲಕ ಜನ್ಮದಿನ ಕಾರ್ಯಕ್ರಮದಲ್ಲಿ ಗಮನ ಸೆಳೆದರು. 
    ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಜೀವ ಸಂಜೀವಿನಿ ರಕ್ತ ಕೇಂದ್ರದ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸೆ.೨೦ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ೨೨೦ ಕೆ.ವಿ ಎಂ.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಸೀಗೆಬಾಗಿ ಹಾಗು ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.೨೦ರ ಶನಿವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೪.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಶ್ರೀ ಹಳದಮ್ಮ ದೇವಿ ದೇವಸ್ಥಾನ ಬೀದಿ ಖಾಜಿ ಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್‌ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಕೃ.ಉ.ಮಾ.ಸ(ಎಪಿಎಂಸಿ), ಗಾಂಧಿವೃತ್ತ, ಕೋಡಿಹಳ್ಳಿ, ಹೊಸಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್‌ಪಟ್‌ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಅರಳಿಹಳ್ಳಿ, ಬದನೆಹಾಳು, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಳ್ಳಿ, ಕಲ್ಪನಹಳ್ಳಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ ಕಲ್ಲಿಹಾಳ್, ಅರಬಿಳಚಿ, ತಿಮ್ಲಾಪುರ, ಅತ್ತಿಗುಂದ, ಗುಡ್ಡದನೇರಳೆಕೆರೆ, ದೇವರಹಳ್ಳಿ, ಕೊಮಾರನಹಳ್ಳಿ, ಬಸಲಿಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.