ಭದ್ರಾವತಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಅಧ್ಯಕ್ಷರಾದ ಎರಡನೇ ಬಾರಿಗೆ ಆಯ್ಕೆಯಾದ ತಳ್ಳಿಕಟ್ಟೆ ಎಚ್. ಲೋಕೇಶಪ್ಪ ಅವರನ್ನು ಸೋಮವಾರ ನ್ಯೂಟೌನ್ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಅಧ್ಯಕ್ಷರಾದ ಎರಡನೇ ಬಾರಿಗೆ ಆಯ್ಕೆಯಾದ ತಳ್ಳಿಕಟ್ಟೆ ಎಚ್. ಲೋಕೇಶಪ್ಪ ಅವರನ್ನು ಸೋಮವಾರ ನ್ಯೂಟೌನ್ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಟ್ರಸ್ಟ್ ವತಿಯಿಂದ ಸನ್ಮಾನಿಸಿ ನೇರಳೆ ಸಸಿ ನೀಡಲಾಯಿತು. ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಪ್ರಸ್ತುತ ನಷ್ಟದಲ್ಲಿದ್ದು, ಅದರ ನಷ್ಟವನ್ನು ತೀರಿಸಿ ರೈತರ ಹಿತ ಕಾಪಾಡುವುದಾಗಿ ಲೋಕೇಶ್ ತಿಳಿಸಿದರು.
ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಪ್ರಜಾವಿಮೋಚನಾ ವಿಮೋಚನಾ ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ, ಪ್ರಧಾನ ಕಾರ್ಯದರ್ಶಿ ಶ್ಯಾಮ್, ಡಿಎಸ್‌ಎಸ್ ಮುಖಂಡ ದಾಸ್, ಕಾರ್ಮಿಕ ಮುಖಂಡ ಬಿ.ಆರ್ ಸುನೀಲ್ ಕುಮಾರ್, ಪತ್ರಕರ್ತ ಅನಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.