ಜ.೩ರಂದು ತಾಲೂಕು ೧೨ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ.
ಭದ್ರಾವತಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಮಾತನಾಡಿದರು.
ಭದ್ರಾವತಿ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಶ್ರಿತ ಹೊಸಸೇತುವೆ ರಸ್ತೆ, ಸಿದ್ದಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಮತ್ತು ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಹಕಾರದೊಂದಿಗೆ ತಾಲೂಕು ೧೨ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ,೩ರ ಶನಿವಾರ ಬೆಳಿಗ್ಗೆ ೧೦.೩೦ಕ್ಕೆ ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ತಿಳಿಸಿದರು
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದ ವಿವಿರಗಳನ್ನು ನೀಡಿದರು. ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಬೆಳಿಗ್ಗೆ ೯.೩೦ಕ್ಕೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ರಾಷ್ಟ್ರಧ್ವಜಾರೋಹಣ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ನಾಡಧ್ವಜಾರೋಹಣ ಹಾಗು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.
ವಿಶ್ವೇಶ್ವರಾಯ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಕೆ. ತೇಜಸ್ವಿನಿ ಬೆಳಿಗ್ಗೆ ೧೦ ಗಂಟೆಗೆ ಸಮ್ಮೇಳನ ಉದ್ಘಾಟಿಸುವರು. ತಾಲೂಕಿನ ಗೋಣಿಬೀಡು ಗ್ರಾಮದ ಎಸ್‌ವಿಎಚ್‌ಎಸ್ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಎಂ.ಎಸ್ ಅನ್ನಪೂರ್ಣ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಮಂಜುನಾಥ್ ಮುಖ್ಯ ಆಥಿತಿಗಳಾಗಿ ಆಗಮಿಸಲಿದ್ದಾರೆ. ವೇದಿಕೆ ತಾಲೂಕು ಘಟಕದ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಸ್ತಾವಿಕ ನುಡಿಗಳನ್ನಾಡಲಿದ್ದು. ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿಇಎಸ್ ವಿದ್ಯಾಸಂಸ್ಥೆ ಕಾರ್ಯಾಧ್ಯಕ್ಷ ಎಂ.ವೆಂಕಟೇಶ್, ಆಡಳಿತಾಧಿಕಾರಿ ಡಾ.ರಾಕೇಶ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಗೋಷ್ಠಿ-೧ರ ಕವಿಗೋಷ್ಠಿಯಲ್ಲಿ ನ್ಯೂಟೌನ್ ಈಶ್ವರಮ್ಮ ಪ್ರೌಢ ಶಾಲೆ ವಿದ್ಯಾರ್ಥಿನಿ ಡಿ. ಗುಣಶ್ರೀ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಷ್ಠಿ-೨ರ ಕಥಾಗೋಷ್ಠಿಯಲ್ಲಿ ನ್ಯೂಟೌನ್ ಎಸ್‌ಎವಿ ಪ್ರೌಢ ಶಾಲೆ ವಿದ್ಯಾರ್ಥಿ ಗುರುರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಷ್ಠಿ-೩ರ ಪ್ರಬಂಧ ರಚನೆ, ಮಂಡನೆಯಲ್ಲಿ ಹೊಸಮನೆ ಶ್ರೀ ಬಾಪೂಜಿ ಪ್ರೌಢ ಶಾಲೆ ವಿದ್ಯಾರ್ಥಿನಿ ಆರ್. ಕಾವ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಂಜೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ತಿಮ್ಮಪ್ಪ, ಮಾಜಿ ಅಧ್ಯಕ್ಷರುಗಳಾದ ಕೋಡ್ಲು ಯಜ್ಞಯ್ಯ, ಕೋಗಲೂರು ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾನಾಯ್ಕ್ ಗೊಂದಿ, ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಪ್ರಭು ಗೌಡ, ಎಸ್.ಕೆ ಮೋಹನ್, ಕೆ.ಆರ್.ಪ್ರಶಾಂತ್ ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಚನ್ನಪ್ಪ, ಬಿ.ಎಸ್.ಪ್ರಕಾಶ್, ಬಿ. ಕಾಂತಪ್ಪ, ಮಲ್ಲಿಕಾಂಬ ವಿರೂಪಾಕ್ಷಪ್ಪ, ತಿಪ್ಪಮ್ಮ, ಸುಶೀಲ, ಗಂಗರಾಜ್, ಜುಂಜ್ಯಾನಾಯ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.