ಪೇಪರ್‌ಟೌನ್ ಆಂಗ್ಲಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ರಾಜ್ಯಮಟ್ಟಕ್ಕೆ ಆಯ್ಕೆ
ಕನ್ನಡ ಪ್ರಭ, ಏಷಿಯಾ ನೆಟ್ ಸುವರ್ಣ ನ್ಯೂಸ್ ವತಿಯಿಂದ `ಕರ್ನಾಟಕ ಅರಣ್ಯ ಅಥವಾ ಕರ್ನಾಟಕದ ವನ್ಯಜೀವಿ' ವಿಷಯ ಕುರಿತು ಆಯೋಜಿಸಲಾಗಿರುವ ಕರ್ನಾಟಕ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಅಂಗವಾಗಿ ಸೋಮವಾರ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ತೃತೀಯ ಬಹುಮಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ : ಕನ್ನಡ ಪ್ರಭ, ಏಷಿಯಾ ನೆಟ್ ಸುವರ್ಣ ನ್ಯೂಸ್ ವತಿಯಿಂದ ಅರಣ್ಯ ಇಲಾಖೆ ಹಾಗು ಕರ್ನಾಟಕ ಚಿತ್ರ ಕಲಾ ಪರಿಷತ್ ಸಹಯೋಗದೊಂದಿಗೆ `ಕರ್ನಾಟಕ ಅರಣ್ಯ ಅಥವಾ ಕರ್ನಾಟಕದ ವನ್ಯಜೀವಿ' ವಿಷಯ ಕುರಿತು ಆಯೋಜಿಸಲಾಗಿರುವ ಕರ್ನಾಟಕ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ತೃತೀಯ ಬಹುಮಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ ಸುಮಾರು ೩೦ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉಲ್ಲಾಸ್ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು.
ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಶ್ರೀ ಕನಕ ವಿದ್ಯಾಸಂಸ್ಥೆಯ ೮ನೇ ತರಗತಿ ವಿದ್ಯಾರ್ಥಿ ಸೈಯದ್ ಉಜೈರ್, ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಕನ್ನಡ ಪ್ರೌಢ ಶಾಲೆ ೯ನೇ ತರಗತಿ ವಿದ್ಯಾರ್ಥಿನಿ ಸೈಯದಾ ಶಾಫಿಯಾ, ಪೇಪರ್ ಟೌನ್ ಆಂಗ್ಲ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ಎಂ. ವಿಶ್ವಾಸ್, ೧೦ನೇ ತರಗತಿ ವಿದ್ಯಾರ್ಥಿ ಹರ್ಷಿತ್ ಯೋಹಾನ್ ಮತ್ತು ಎಂ. ಉಲ್ಲಾಸ್ ಸೇರಿದಂತೆ ತಾಲೂಕಿನಿಂದ ೫ ಜನ ಸ್ಪರ್ಧಿಗಳು ಭಾಗವಹಿಸಿದ್ದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ ಕಾಂತೇಶ್, ಕನ್ನಡಪ್ರಭ ಜಿಲ್ಲಾ ವಿಶೇಷ ವರದಿಗಾರ ಗೋಪಾಲ್ ಎಸ್. ಯಡಗೆರೆ, ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಸಿ. ಕಾರ್ತಿಕ್ ಮತ್ತು ಪ್ರಸರಣ ವಿಭಾಗದ ವ್ಯವಸ್ಥಾಪಕ ಎಸ್.ಕೆ ಸಂಚಿತ್ ಸೇರಿದಂತೆ ಇನ್ನಿತರರು ಬಹುಮಾನ ವಿತರಿಸಿದರು.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಎಂ. ಉಲ್ಲಾಸ್ ಚಿತ್ರಕಲಾ ಶಿಕ್ಷಕ ಎಂ. ಮಾಧವ ಮೂರ್ತಿ ಪುತ್ರರಾಗಿದ್ದಾರೆ. ಈ ವಿದ್ಯಾರ್ಥಿಗೆ ಪೇಪರ್‌ಟೌನ್ ಆಂಗ್ಲ ಶಾಲೆ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಆಡಳಿತಮಂಡಳಿ ಅಭಿನಂದಿಸಿದೆ.