ಅನನ್ಯ ಶಾಲೆ ವಿದ್ಯಾರ್ಥಿಗಳಾದ ಅಭಿನಂದನ್, ಚಾರ್ವಿಕ ಜಿ ಪಟೇಲ್ ರಾಜ್ಯಮಟ್ಟಕ್ಕೆ ಆಯ್ಕೆ
ಭದ್ರಾವತಿ ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ : ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ೨೧ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಾಲಾ ಆವರಣದಲ್ಲಿ ಜ.೮ರ ಗುರುವಾರ ನಡೆದಿದ್ದು, ಅನನ್ಯ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿಗಳಾದ ಎನ್. ಅಭಿನಂದನ್ ಸ್ವರಚಿತ ಕಥಾ ವಾಚನ ಸ್ಪರ್ಧೆಯಲ್ಲಿ ಹಾಗೂ ಚಾರ್ವಿಕ ಜಿ ಪಟೇಲ್ ಸ್ವರಚಿತ ಕಾವ್ಯ ಮಂಡನೆ ಸ್ಪರ್ಧೆಯಲ್ಲಿ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರುಗಳಾದ ಟಿ. ಲತಾ ಮತ್ತು ಹೇಮಜನಾಯ್ಕ ಇವರು ತರಬೇತಿ ನೀಡಿದ್ದು, ವಿದ್ಯಾರ್ಥಿಗಳನ್ನು ಹಾಗು ತರಬೇತಿ ನೀಡಿದ ಶಿಕ್ಷಕರನ್ನು ಅನನ್ಯ ಶಾಲೆಯ ಆಡಳಿತ ಮಂಡಳಿ, ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ.