ಹಿರಿಯ ಕಾರ್ಮಿಕ ಹೋರಾಟಗಾರ ಡಿ.ಸಿ ಮಾಯಣ್ಣರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಭದ್ರಾವತಿ ನಗರದ ಹಿರಿಯ ಕಾರ್ಮಿಕ ಹೋರಾಟಗಾರ, ಕಾಮ್ರೇಡ್ ಡಿ.ಸಿ ಮಾಯಣ್ಣರವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಶನಿವಾರ ಅವರನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಹೋರಾಟಗಾರ, ಕಾಮ್ರೇಡ್ ಡಿ.ಸಿ ಮಾಯಣ್ಣರವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಶನಿವಾರ ಅವರನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
೯೨ ವರ್ಷ ವಯಸ್ಸಿನ ಮಾಯಣ್ಣರವರು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯರಾಗಿದ್ದಾರೆ. ಇವರ ನೇತೃತ್ವದಲ್ಲಿ ಹಲವು ಪ್ರಮುಖ ಹೋರಾಟಗಳು ನಡೆದಿವೆ. ಯಾವುದೇ ಹೋರಾಟವಿರಲಿ ಮಾಯಣ್ಣನವರು ಪಾಲ್ಗೊಂಡು ಹೋರಾಟಗಾರರಾಗಿ ಸ್ಪೂರ್ತಿ ನೀಡುತ್ತಿದ್ದರು.
ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಕಳೆದ ೨ ವರ್ಷಗಳ ಹಿಂದೆ ವಿಶ್ವ ಮಾನವ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಅಲ್ಲದೆ ನಗರಸಭೆಯಿಂದ ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿತ್ತು. ತಾಲೂಕು ಆಡಳಿತ ಸಹ ಹಲವು ಬಾರಿ ಇವರನ್ನು ಸನ್ಮಾನಿಸಿ ಗೌರವಿಸಿದೆ.
ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಕಾರ್ಮಿಕ ಹೋರಾಟಗಾರರು, ಗಣ್ಯರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು.