ತರಳಬಾಳು ಹುಣ್ಣಿಮೆ ಮಹೋತ್ಸವ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ
ಭದ್ರಾವತಿಯಲ್ಲಿ ಆಯೋಜಿಸಲಾಗಿರುವ ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗಿನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ: ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗಿನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸ್ಥಳೀಯ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಒಟ್ಟು ಆರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ವಿಶೇಷವಾಗಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕೇಳಿದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಸಂಕೋಚವಿಲ್ಲದೆ ಸಮರ್ಪಕ ಉತ್ತರಗಳನ್ನು ನೀಡಿದ್ದು ಗಮನ ಸೆಳೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಟಿ. ತಿಮ್ಮಪ್ಪ ಸೇರಿದಂತೆ ಪರಿಷತ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ರಸಪ್ರಶ್ನೆ ಕಾರ್ಯಕ್ರಮವನ್ನು ಬಿ.ಎಲ್. ಮೋಹನ್ ಯಶಸ್ವಿಯಾಗಿ ನಡೆಸಿಕೊಟ್ಟರು.
ರಸಪ್ರಶ್ನೆ ಸ್ಪರ್ಧೆಯ ವಿಜೇತರು:
ಪ್ರಥಮ ಸ್ಥಾನ : ರಕ್ಷಿತಾ .ಸಿ.ಆರ್ ಮತ್ತು ರೂಪಾ .ಡಿ ಸಂಚಿ ಹೊನ್ನಮ್ಮ ಪ್ರೌಢಶಾಲೆ, ಭದ್ರಾವತಿ. ದ್ವಿತೀಯ ಸ್ಥಾನ : ಪೂರ್ವಿಕಾ .ಎಸ್ ಮತ್ತು ಕೃತಿಕಾ .ಸಿ.ವಿ ಎಸ್.ಐ.ಇ.ಎಸ್ ಪ್ರೌಢಶಾಲೆ, ಕಾರೇಹಳ್ಳಿ, ಭದ್ರಾವತಿ. ತೃತೀಯ ಸ್ಥಾನ: ಪ್ರತೀಕ್ ಮತ್ತು ಮೊಹಮದ್ ತಾಹಿತ್ ನ್ಯೂಟೌನ್ ಎಸ್.ಎ.ವಿ ಪ್ರೌಢಶಾಲೆ, ಭದ್ರಾವತಿ