ಹಿರಿಯ ಮುಖಂಡ ಕರಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕರಿಯಪ್ಪ
ಭದ್ರಾವತಿ: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ರಾಜಕೀಯ ಬದುಕಿನ ಜೊತೆಗಾರ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಕರಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರರ, ಕುರುಬ ಸಮಾಜದ ಮುಖಂಡರಾದ ಕರಿಯಪ್ಪ ಎಂ.ಜೆ ಅಪ್ಪಾಜಿಯವರ ಜೊತೆಗೆ ತಮ್ಮ ರಾಜಕೀಯ ಬದುಕು ಆರಂಭಿಸಿದ್ದು, ಸುಮಾರು ೩ ದಶಕಗಳಿಗೂ ಹೆಚ್ಚು ಕಾಲದಿಂದ ಜೆಡಿಎಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಒಂದು ಬಾರಿ ನಗರಸಭೆಗೆ ಆಯ್ಕೆಯಾಗಿದ್ದಾರೆ.
ಇದೀಗ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪತ್ರಿಕಾ ಹೇಳಿಕೆಯಲ್ಲಿ ಇವರ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ.