ಡಿ.ಸಿ ಮಾಯಣ್ಣ ಆರೋಗ್ಯ ವಿಚಾರಿಸಿದ ಶಾಸಕ ಬಿ.ಕೆ ಸಂಗಮೇಶ್ವರ್

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಭಾನುವಾರ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾರ್ಮಿಕ ಹೋರಾಟಗಾರ, ಕಾಮ್ರೇಡ್ ಡಿ.ಸಿ ಮಾಯಣ್ಣರವರ ಆರೋಗ್ಯ ವಿಚಾರಿಸಿದರು. 
    ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಭಾನುವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾರ್ಮಿಕ ಹೋರಾಟಗಾರ, ಕಾಮ್ರೇಡ್ ಡಿ.ಸಿ ಮಾಯಣ್ಣರವರ ಆರೋಗ್ಯ ವಿಚಾರಿಸಿದರು. 
    ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸಂಗಮೇಶ್ವರ್‌ರವರು ವೈದ್ಯರಿಂದ ಮಾಯಣ್ಣರವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದರು. 
    ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್. ರವಿಕುಮಾರ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಹಿರಿಯ ಪತ್ರಕರ್ತ ಶಿವಶಂಕರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.