ರಾಷ್ಟ್ರೀಯ ಹಬ್ಬಗಳನ್ನು ಮನೆಯ ಹಬ್ಬದಂತೆ ಆಚರಿಸಿ : ಸಿರಿಗೆರೆ ಶ್ರೀ
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೩ನೇ ದಿನ ಸೋಮವಾರ ಮಹಾಮಂಟಪದ ಮುಂಭಾಗದಲ್ಲಿ ೭೭ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೩ನೇ ದಿನ ಸೋಮವಾರ ಮಹಾಮಂಟಪದ ಮುಂಭಾಗದಲ್ಲಿ ೭೭ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.
ರಾಷ್ಟ್ರಿಯ ಹಬ್ಬಗಳನ್ನು ಕೇವಲ ಸರ್ಕಾರಿ ಕಾರ್ಯಕ್ರಮಗಳು ಎಂದು ಭಾವಿಸದೆ ಪ್ರತಿಯೊಂದು ಕುಟುಂಬವೂ ಅವುಗಳನ್ನು ಮನೆಯ ಹಬ್ಬದಂತೆ ಭಾವಿಸಿ ಆಚರಿಸಬೇಕೆಂದು ಕರೆ ನೀಡಿದರು.
ದೇಶಭಕ್ತಿ ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು, ಸಂವಿಧಾನದ ಮೌಲ್ಯಗಳನ್ನು ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೆಂದು ತಿಳಿಸಿ ಈ ನಿಟ್ಟಿನಲ್ಲಿ ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಎಲ್ಲರೂ ಸ್ವಯಂಪ್ರೇರಿತವಾಗಿ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ದೇಶದ ಏಕತೆ, ಸಮಾನತೆ ಮತ್ತು ಶಾಂತಿಯ ಸಂದೇಶವನ್ನು ಸಮಾಜದಲ್ಲಿ ಹರಡಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಟಿ. ತಿಮ್ಮಪ್ಪ, ತಾಲ್ಲೂಕು ಸಾಧು ಸದ್ಧರ್ಮ ಸಮಾಜದ ಅಧ್ಯಕ್ಷ ಕೆ.ಜಿ. ರವಿಕುಮಾರ್, ಮಹಾಮಂಟಪ ಸಂಚಾಲಕರಾದ ಕೆ.ಎಚ್ ತೀರ್ಥಯ್ಯ, ಕ್ರೀಡಾ ಸಮಿತಿ ಸಂಚಾಲಕ ಎಂ.ಎಸ್. ರವಿ, ಸಮಾಜದ ಪ್ರಮುಖರಾದ ಮಲ್ಲಯ್ಯ, ದೈಹಿಕ ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.