ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜನೆ ಸಮಾಜಕ್ಕೆ ಮಾದರಿ : ಬಲ್ಕೀಶ್ ಬಾನು
ಭದ್ರಾವತಿ ನಗರಸಭೆ ವಾರ್ಡ್ ನಂ.೨೩ರ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನುರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಉತ್ತಮ ಸೇವಾ ಕಾರ್ಯ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಇಂತಹ ಕಾರ್ಯಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕೆಂದು ಪ್ರಶಂಸೆ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು ವ್ಯಕ್ತಪಡಿಸಿದರು.
ನಗರಸಭೆ ವಾರ್ಡ್ ನಂ.೨೩ರ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ವ ಮಸೀದಿಗಳು ಮತ್ತು ದರ್ಗಾಗಳ ಒಕ್ಕೂಟದ ವತಿಯಿಂದ ಶಿವಮೊಗ್ಗ ಮಲ್ನಾಡ್ ಲೈಫ್‌ಲೈನ್ ಆಸ್ಪತ್ರೆ ಮತ್ತು ಲಯನ್ಸ್ ಕ್ಲಬ್, ಶಿವಮೊಗ್ಗ ಮಲ್ನಾಡ್, ಡಿಸ್ಟ್ರಿಕ್ಟ್-೩೧೭ಸಿ ಹಾಗು ನಗರದ ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ನಗರಸಭೆ ಬಷೀರ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಕೋಟೇಶ್ವರರಾವ್, ಅಂಜುಮಾನ್ ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ವಿವಿಧ ಮಸೀದಿಗಳ, ದರ್ಗಾಗಳ, ಚರ್ಚ್‌ಗಳ ಹಾಗು ದೇವಸ್ಥಾನಗಳ ಮುಖಂಡರು ಉಪಸ್ಥಿತರಿದ್ದರು. ಸ್ಥಳೀಯ ಹಿರಿಯ ನಿವಾಸಿ ಸಾದವಲಿ ಉಚಿತ ಆರೋಗ್ಯ ತಪಾಸಣೆ ಹಾಗು ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.