ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನ ಕಾರ್ಯಕ್ರಮ ತರಳಬಾಳು ಶ್ರೀಗಳ ದಿವ್ಯಸಾನಿಧ್ಯ

ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಮಾತನಾಡಿದರು.
    ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಮಾತನಾಡಿದರು. 
    ವೇದಿಕೆಯಲ್ಲಿ ಉಡುಪಿ ಪುತ್ತಿಗೆ ಮಠ,  ಶ್ರೀಮನ್ನಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀಮದುಪೇಂದ್ರತೀರ್ಥ ಪೀಠದ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು, ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ಬಿ.ವೈ ರಾಘವೇಂದ್ರ, ಗೋವಿಂದ ಕಾರಜೋಳ, ಶಾಸಕ ಬಿ.ಕೆ ಸಂಗಮೇಶ್ವರ್, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘ, ಸಿರಿಗೆರೆ ಅಧ್ಯಕ್ಷ ಎಚ್.ಆರ್ ಬಸವರಾಜಪ್ಪ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. 
    ಉಪನ್ಯಾಸಕರಾಗಿ ಜಾನಪದ ವಿದ್ವಾಂಸ ಪ್ರೊ. ಶಂಭು ವಿ. ಬಳಿಗಾರ, ಕುವೆಂಪು ವಿ.ವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಉಪನ್ಯಾಸಕಿ ಶುಭ ಮರವಂತೆ, ರಂಗಭೂಮಿ ಕಲಾವಿದ ಅರುಣ ಸಾಗರ್ ಸೇರಿದಂತೆ ಇನ್ನಿತರರು ಉಪನ್ಯಾಸ ನೀಡಿದರು.