ತರಳಬಾಳು ಹುಣ್ಣಿಮೆ ಮಹೋತ್ಸವ : ಬೃಹತ್ ಮೇಳ, ತಿಂಡಿ ತಿನಿಸುಗಳ ಮಳಿಗೆ, ಬಣ್ಣ ಬಣ್ಣದ ರಂಗೋಲಿ

ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಕ್ತರು ಬೃಹತ್ ಮೇಳದಲ್ಲಿ ತೆರೆಯಲಾಗಿರುವ ಕೃಷಿ ಉಪಕರಣಗಳ ಪ್ರದರ್ಶನವನ್ನು ವೀಕ್ಷಿಸುತ್ತಿರುವುದು
    ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಭಕ್ತರ ದಂಡು ಹರಿದು ಬರುತ್ತಿದ್ದು, ಮತ್ತೊಂದೆಡೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ. 
 

  ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ತೆರೆಯಲಾಗಿರುವ ಬಗೆ ಬಗೆಯ ತಿಂಡಿ ತಿನಿಸುಗಳ ಮಳಿಗೆಗಳು. 
    ಹೆಲಿಪ್ಯಾಡ್ ಆವರಣದ ಸುತ್ತಮುತ್ತಲೂ ಭಕ್ತರ ದಂಡು ಒಂದೆಡೆಯಾದರೆ, ಮತ್ತೊಂದೆಡೆ ಬಗೆ ಬಗೆಯ ತಿಂಡಿ ತಿನಿಸುಗಳ ಮಳಿಗೆಗಳು, ಇನ್ನೊಂದೆಡೆ ಕೃಷಿ ಉಪಕರಣಗಳು, ಆರೋಗ್ಯ ಕ್ಷೇತ್ರದ ವಿವಿಧ ಸೇವೆಗಳನೊಳಗೊಂಡ, ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಗು ಇನ್ನಿತರ ಮಳಿಗೆಗಳನ್ನೊಳಗೊಂಡ ಬೃಹತ್ ಮೇಳ ತೆರೆಯಲಾಗಿದೆ. ಮೇಳದಲ್ಲಿ ಭಕ್ತರು ಮಳಿಗೆಗಳಿಗೆ ತೆರಳಿ ಮಾಹಿತಿ ಪಡೆಯುತ್ತಿರುವುದು ಕಂಡು ಬಂದಿತು. ವೇದಿಕೆ ಮುಂಭಾಗದಲ್ಲಿ ಕೃತಕ ಆನೆ ಭಕ್ತರನ್ನು ಆಕರ್ಷಿಸಿತು. 
    ಸ್ವಾಗತ ದ್ವಾರದ ಮಾರ್ಗದುದ್ದಕ್ಕೂ ಸಗಣಿಯಿಂದ ಸಾರಿಸಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಮಹೋತ್ಸವಕ್ಕೆ ಆಗಮಿಸುತ್ತಿರುವ ಗುರುವರ್ಯರು ಹಾಗು ಗಣ್ಯರನ್ನು ಸ್ವಾಗತಿಸಲಾಯಿತು. ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.


ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಶಿವಮೊಗ್ಗ ಹಿಂದುಸ್ತಾನಿ ಗಾಯಕರಾದ ವಿದ್ವಾನ್ ನೌಶಾದ್ ಮತ್ತು ವಿದ್ವಾನ್ ನಿಶಾದ್ ಹರ್ಲಾಪುರ ಅವರಿಂದ ವಚನಗೀತೆ ನಡೆಯಿತು. 
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಶಿವಮೊಗ್ಗ ಹಿಂದುಸ್ತಾನಿ ಗಾಯಕರಾದ ವಿದ್ವಾನ್ ನೌಶಾದ್ ಮತ್ತು ವಿದ್ವಾನ್ ನಿಶಾದ್ ಹರ್ಲಾಪುರ ಅವರಿಂದ ವಚನಗೀತೆ ನಡೆಯಿತು. 
ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಹೋತ್ಸವಕ್ಕೆ ಸಿರಿಗೆರೆ ಬೃಹನ್ಮಠ ದಿಂದ ಆಗಮಿಸುವಾಗ ಶ್ರೀ ಮಠದ ಹಿರಿಯ ಸ್ವಾಮೀಜಿಗೆಯವರ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು. ಮಾರ್ಗ ಮಧ್ಯದ ಗ್ರಾಮಗಳಲ್ಲಿ ಶ್ರೀಗಳನ್ನು ಭಕ್ತರು ಅದ್ದೂರಿಯಾಗಿ ಸ್ವಾಗತಿಸಿದರು.   
 
ಡಿ೨೪-ಬಿಡಿವಿಟಿ೨
.  
 
ಡಿ೨೪-ಬಿಡಿವಿಟಿ೨(ಎ)

 
ಡಿ೨೪-ಬಿಡಿವಿಟಿ೨(ಬಿ)



Ananthakumara, Reporter, Kannadaprabha,
NDK/31A, Near, Sri Satyasayi Baba school,
Newtown, Bhadravathi:-577301(Tq)
Shimoga(Dis)
Mob: 9738801478
: 9482007466