ಸಮಾಜದಲ್ಲಿ ಪತ್ರಕರ್ತರು ಸತ್ಯ, ವಿಶ್ವಾಸ, ಪ್ರಾಮಾಣಿಕತೆ ಉಳಿಸಿಕೊಳ್ಳುವ ಅಗತ್ಯವಿದೆ : ಬಿ.ಕೆ ಸಂಗಮೇಶ್ವರ್
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಸಕರಾದ ಬಿ.ಕೆ ಸಂಗಮೇಶ್ವರ್, ಶಾರದಪೂರ್‍ಯಾನಾಯ್ಕ, ಬಲ್ಕೀಶ್ ಬಾನು ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ: ಪ್ರಸ್ತುತ ಸಮಾಜದಲ್ಲಿ ಪತ್ರಕರ್ತರು, ಸತ್ಯ, ವಿಶ್ವಾಸ, ಪ್ರಾಮಾಣಿಕತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಭಾನುವಾರ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಗಳನ್ನು ಮುನ್ನಡೆಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಈ ನಡುವೆ ಇಂದು ಸಮಾಜದಲ್ಲಿ ಪ್ರತಿಯೊಬ್ಬರು ಪತ್ರಕರ್ತರ ವಿಶ್ವಾಸಾರ್ಹತೆ ಪ್ರಶ್ನಿಸುವಂತಾಗಿದೆ. ಪತ್ರಕರ್ತರು ತಾವು ನೀಡುವ ಪತ್ರಿಕೆಗಳಲ್ಲಿ ಪ್ರಕಟಿಸುವ ಸುದ್ದಿಗಳನ್ನು ಪರಾಮರ್ಶಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ನೂತನ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಪತ್ರಕರ್ತರ ಏಳಿಗೆಗೆ ತಾವು ಸದಾ ಬದ್ಧವಾಗಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಮಾತನಾಡಿ, ಪ್ರಸ್ತುತ ಪತ್ರಕರ್ತರು ನಮ್ಮಂತಹ ರಾಜಕಾರಣಿಗಳನ್ನು ಸದಾ ಕಾಲ ಎಚ್ಚರಿಸುವಂತಹ ಕೆಲಸ ನಿರ್ವಹಿಸಬೇಕು. ಸಮಾಜದ ಸಮಸ್ಯೆಗಳನ್ನು ತಮ್ಮ ಹರಿತವಾದ ಲೇಖನಿಗಳ ಮೂಲಕ ತಿಳಿಸುವಂತಾಗಬೇಕು. ಜಿಲ್ಲೆಯಲ್ಲಿ ಪತ್ರಕರ್ತರ ಸಂಘ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿಕೊಂಡು ಬರುವ ಮೂಲಕ ತನ್ನದೇ ಆದ ಆಸ್ತಿತ್ವ ಉಳಿಸಿಕೊಂಡಿದೆ ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಆರ್.ಪಿ ಭರತ್‌ರಾಜ್ ಸಿಂಗ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯೆ ಅನುಸುಧಾಮೋಹನ್ ಪಳನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್(ಟೆಲೆಕ್ಸ್), ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ, ಖಜಾಂಚಿ ರೋಹಿತ್ ರಂಗಸ್ವಾಮಿ , ಜಿಲ್ಲಾ ಉಪಾಧ್ಯಕ್ಷ, ತಾಲೂಕು ಚುನಾವಣಾ ಉಸ್ತುವಾರಿ ದೇಶಾದ್ರಿ ಹೊಸ್ಮನೆ, ಪ್ರತಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಎಚ್.ಯು ವೈದ್ಯನಾಥ ಪ್ರಮಾಣವಚನ ಬೋಧಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹಿರಿಯ ಪತ್ರಕರ್ತ ಎನ್. ಬಾಬು ಸ್ವಾಗತಿಸಿ, ಉಪಾಧ್ಯಕ್ಷ ಸುಭಾಷ್ ರಾವ್ ಸಿಂಧ್ಯಾ ನಿರೂಪಿಸಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಆರ್.ಪಿ ಭರತ್‌ರಾಜ್ ಸಿಂಗ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ನೂತನ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಜಿ. ಸುಭಾಷ್‌ರಾವ್ ಸಿಂಧ್ಯಾ, ಕಾರ್ಯದರ್ಶಿಯಾಗಿ ಅನಂತಕುಮಾರ್, ಖಜಾಂಚಿಯಾಗಿ ಆರ್. ಫಿಲೋಮಿನಾ ಹಾಗು ೮ ಮಂದಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪದಗ್ರಹಣ ಸ್ವೀಕರಿಸಿದರು.
ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
.jpeg)