ಜ.೨೬ರಂದು ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವ

    ಭದ್ರಾವತಿ : ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.೨೬ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಗಣ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 
    ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸುವರು. 
    ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ ಹಾಗು ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸರ್ಕಾರದ ೫ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.