ಜ.೧೧ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಭದ್ರಾವತಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.೧೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ತಿಳಿಸಿದರು. 
    ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.೧೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ತಿಳಿಸಿದರು. 
    ಅವರು ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಪದಾಧಿಕಾರಿಗಳ ಸಮಾರಂಭಕ್ಕೆ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ತಹಸೀಲ್ದಾರ್ ಪರುಸಪ್ಪ ಕುರುಬರ, ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್(ಟೆಲೆಕ್ಸ್), ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಮತ್ತು ತಾಲೂಕು ಘಟಕದ ಚುನಾವಣಾ ಉಸ್ತುವಾರಿ ದೇಶಾದ್ರಿ ಹೊಸ್ಮನೆ  ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 
    ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಯು ವೈದ್ಯನಾಥ ಪ್ರಮಾಣ ವಚನ ಬೋಧನೆ ಮಾಡಲಿದ್ದು, ರಾಜ್ಯ ಸಮಿತಿ ಸದಸ್ಯ ಕೆ.ವಿ ಶಿವಕುಮಾರ್ ಪ್ರಮಾಣ ಪತ್ರ ವಿತರಿಸಲಿದ್ದಾರೆ. ಸಂಘದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಲಿದ್ದು, ಪ್ರತಿಕಾಭವನ ಟ್ರಸ್ಟ್ ಅಧ್ಯಕ್ಷರಾದ ಕಣ್ಣಪ್ಪ ದಿಕ್ಸೂಚಿ ಭಾಷಣ ನೆರವೇರಿಸಲಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು. 
    ಪತ್ರಿಕಾಗೋಷ್ಠಿಯಲ್ಲಿ ಪ್ರತಿಕಾಭವನ ಟ್ರಸ್ಟ್ ಅಧ್ಯಕ್ಷರಾದ ಕಣ್ಣಪ್ಪ, ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ, ಕಾರ್ಯದರ್ಶಿ ಅನಂತಕುಮಾರ್ ಮತ್ತು ಖಜಾಂಚಿ ಆರ್. ಫಿಲೋಮಿನಾ ಉಪಸ್ಥಿತರಿದ್ದರು.