ಎಂ.ಬಿ ಧರಣಿದರ ಗೌಡ
ಎಂ.ಬಿ ಧರಣಿದರ ಗೌಡ
ಭದ್ರಾವತಿ : ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಪೋರ್ಮನ್, ಸಿದ್ದಾಪುರ ನಿವಾಸಿ ಎಂ.ಬಿ ಧರಣಿದರ ಗೌಡ(೬೭) ಮಂಗಳವಾರ ನಿಧನ ಹೊಂದಿದರು.
ಪತ್ನಿ, ಪುತ್ರಿ ಹಾಗು ಪುತ್ರ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಬುಧವಾರ ಸಿದ್ದಾಪುರ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ಎಂಪಿಎಂ ನಿವೃತ್ತ ನೌಕರರು, ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.