ಸುರಗಿತೋಪು ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಂಪನ್ನ

ಭದ್ರಾವತಿ ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾಗಿ ಜರುಗಿತು. ಶ್ರೀ ಚೌಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾಗಿ ಜರುಗುವ ಮೂಲಕ ಸಂಪನ್ನಗೊಂಡಿತು. 
    ಸೋಮವಾರ ಬೆಳಿಗ್ಗೆ ಕಾಗದನಗರ ಎಂಪಿಎಂ ಸೊಸೈಟಿ ಮುಂಭಾಗದ ನಾಗರಕಟ್ಟೆಯಿಂದ ದೇವಸ್ಥಾನಕ್ಕೆ ಗಂಗೆ ತರುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಚೌಡೇಶ್ವರಿ ದೇವಿಗೆ ಮತ್ತು ಮುನೇಶ್ವರಸ್ವಾಮಿಗೆ ಮಹಾಭಿಷೇಕ ನೆರವೇರಿತು. ನಂತರ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಾಯಿತು.  ಶ್ರೀ ಚೌಡೇಶ್ವರಿ ದೇವಿಗೆ ಮತ್ತು ಮುನೇಶ್ವರ ಸ್ವಮಿಗೆ ಮಹಾಮಂಗಳಾರತಿ ನೆರವೇರಿತು. 


ಭದ್ರಾವತಿ ನಗರಸಭೆ ವ್ಯಾಪ್ತಿಯ ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆ ರಸ್ತೆಯ ಸುರಗಿತೋಪಿನ ಶ್ರೀ ಚೌಡೇಶ್ವರಿ ದೇವಿ ಹಾಗು ಮುನೇಶ್ವರಸ್ವಾಮಿಯ ೫೦ನೇ ವರ್ಷದ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಯಶಸ್ವಿಯಾಗಿ ಜರುಗಿತು. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಮತ್ತು ಕಾರ್ಖಾನೆಯ ಉಪ ಮಹಾಪ್ರಬಂಧಕ ಸುಖಾಲಿ ಲೋಕನಾಥ್ ಪಾಲ್ಗೊಂಡು ದೇವಿಯ ದರ್ಶನ ಪಡೆದರು. 
    ಜಾತ್ರಾ ಮಹೋತ್ಸವದಲ್ಲಿ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್  ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಸಹಸ್ರರಾರು ಭಕ್ತರು ಪಾಲ್ಗೊಂಡಿದ್ದರು.