ಹೊಸ ಸೇತುವೆ ಮರು ನಿರ್ಮಾಣ ಕಾರ್ಯಕ್ಕೆ ಸಿದ್ದತೆ : ಅಧಿಕಾರಿಗಳಿಂದ ಶಾಸಕರಿಗೆ ವಿವರಣೆ

ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಇನ್ನೇನು ಕಾಮಗಾರಿ ಆರಂಭಗೊಳ್ಳಲಿದ್ದು, ಈ ಸಂಬಂಧ ಸ್ಥಳಕ್ಕೆ ಸೋಮಾರ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಅಧಿಕಾರಿಗಳು ಸೇತುವೆ ರೂಪುರೇಷೆ ಕುರಿತು ವಿವರಿಸಿದರು. 
    ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಇನ್ನೇನು ಕಾಮಗಾರಿ ಆರಂಭಗೊಳ್ಳಲಿದ್ದು, ಈ ಸಂಬಂಧ ಸ್ಥಳಕ್ಕೆ ಸೋಮಾರ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಅಧಿಕಾರಿಗಳು ಸೇತುವೆ ರೂಪುರೇಷೆ ಕುರಿತು ವಿವರಿಸಿದರು. 
    ಈಗಿರುವ ಹೊಸ ಸೇತುವೆ ಎತ್ತರ ಕಡಿಮೆ ಹೊಂದಿದ್ದು, ಇದರಿಂದಾಗಿ ಪ್ರತಿವರ್ಷ ಮಳೆಗಾಲದಲ್ಲಿ ಸೇತುವೆ ಮುಳುಗಡೆಗೊಂಡು ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಸಮೀಪದ ಮನೆಗಳಿಗೆ ನುಗ್ಗುತ್ತಿದ್ದು, ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಸವಾಲಿನ ಕೆಲಸವಾಗುತ್ತಿದೆ. ಅಲ್ಲದೆ ಸೇತುವೆ ಮುಳುಗಡೆಗೊಂಡ ಸಂದರ್ಭದಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗತಗೊಳಿಸಲಾಗುತ್ತಿದೆ. ಇದರಿಂದಾಗಿ ವಾಹನ ದಟ್ಟಣೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ಸೇತುವೆ ಎತ್ತರಗೊಳಿಸುವ ಬೇಡಿಕೆ ಬಹಳ ವರ್ಷಗಳಿಂದ ಉಳಿದಿತ್ತು. ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನಿರಂತರ ಪ್ರಯತ್ನದಿಂದಾಗಿ ಸೇತುವೆ ಮರು ನಿರ್ಮಾಣಕ್ಕೆ ಅನುಮೋದನೆ ದೊರೆಯುವ ಜೊತೆಗೆ ಸುಮಾರು ೪೨ ಕೋ. ರು. ಅನುದಾನ ಸಹ ಮಂಜೂರಾತಿಯಾಗಿದೆ. 


    ಲೋಕೋಪಯೋಗಿ ಇಲಾಖೆ ಸುಮಾರು ೪೨ ಕೋ. ರು. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದು, ಈ ಸಂಬಂಧ ನೀಲನಕ್ಷೆ ಸಿದ್ದಪಡಿಸಲಾಗಿದೆ. ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಗಿರಿಯಪ್ಪ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ನಗರಸಭೆ ಕಿರಿಯ ಅಭಿಯಂತರ ಕೆ. ಪ್ರಸಾದ್, ಕೆ.ಜಿ ಸಂತೋಷ್ ಪಾಟೀಲ್ ಸೇರಿದಂತೆ ಇನ್ನಿತರರು ಶಾಸಕ ಸಂಗಮೇಶ್ವರ್‌ಗೆ ಮಾಹಿತಿ ನೀಡಿದರು. 
    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಚನ್ನಪ್ಪ, ಎಂ. ಮಣಿ ಎಎನ್‌ಎಸ್, ಆರ್. ಶ್ರೇಯಸ್(ಚಿಟ್ಟೆ), ಎನ್. ಮಂಜುನಾಥ್, ರಾಜಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.