ಬಿ.ಎಚ್ ರಸ್ತೆ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿ ಬೆಂಕಿ : ವಿಐಎಸ್‌ಎಲ್ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
ಜನನಿಬಿಡ ಪ್ರದೇಶವಾದ ಭದ್ರಾವತಿ ನಗರದ ಬಿ.ಎಚ್ ರಸ್ತೆ, ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಬುಧವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಭದ್ರಾವತಿ : ಜನನಿಬಿಡ ಪ್ರದೇಶವಾದ ನಗರದ ಬಿ.ಎಚ್ ರಸ್ತೆ, ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಬುಧವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ವಿಐಎಸ್‌ಎಲ್ ಕಾರ್ಖಾನೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ವಿಐಎಸ್‌ಎಲ್ ಕಾರ್ಖಾನೆ ಕಾಂಪೌಂಡ್‌ಗೆ ಹಾಗು ರೈಲ್ವೆ ಹಳಿಗೆ ಹೊಂದಿಕೊಂಡಿರುವ ಜಾಗದಲ್ಲಿ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಈ ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ಸ್ಥಳದಲ್ಲಿಯೇ ರಸ್ತೆ ಬದಿ ವ್ಯಾಪಾರಿಗಳು ಪೆಟ್ಟಿಗೆ ಅಂಗಡಿ ಜೊತೆಗೆ ಟೆಂಟ್‌ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ. ಅಲ್ಲದೆ ಮತ್ತೊಂದು ಸಮೀಪದಲ್ಲಿ ಆಟೋ ನಿಲ್ದಾಣವಿದೆ. ಇಂತಹ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಆತಂಕ ಉಂಟು ಮಾಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಬೇಸಿಗೆ ಹಿನ್ನಲೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿದ್ದು, ಇಂತಹ ಘಟನೆಗಳು ಕಂಡು ಬಂದ ತಕ್ಷಣ ಮಾಹಿತಿ ನೀಡುವಂತೆ ಅಗ್ನಿಶಾಮಕ ಇಲಾಖೆ ಸಾರ್ವಜನಿಕರಿಗೆ ಕೋರಿದೆ.
.jpeg)