ಫೆ.೧೯ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ: ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ಪೈಪ್ ಲೈನ್ ಹಾಗು ಎಫ್-೧ ಐ.ಪಿ ಫೀಡರ್ ಸ್ಥಳಾಂತರ ಮತ್ತು ವಿದ್ಯುತ್ ವಿತರಣಾ ಕೇಂದ್ರ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.೧೯ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ತಾಲೂಕಿನ ವದಿಯೂರು, ಗ್ಯಾರೇಜ್ ಕ್ಯಾಂಪ್, ಸಿಂಗನಮನೆ, ಶಂಕರಘಟ್ಟ, ಕುವೆಂಪು ವಿಶ್ವ ವಿದ್ಯಾನಿಲಯ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಶಾಂತಿನಗರ, ತಾವರಘಟ್ಟ, ಮಲ್ಲಿಗೇನಹಳ್ಳಿ, ತಮ್ಮಡಿಹಳ್ಳಿ, ಜಂಕ್ಷನ್, ರಂಗನಾಥಪುರ, ಗೌಳಿಗರ ಕ್ಯಾಂಪ್, ಹುಣಸೇಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.